ಕನ್ನಡಿಗನ ಮೇಲೆ ಪೊಲೀಸ್ ಹಲ್ಲೆ ಪ್ರಕರಣದ ಕುರಿತು ಏನಂದ್ರು ಕರವೇ ನಾರಾಯಣಗೌಡ
ಬೆಳಗಾವಿ : ಕನ್ನಡ ಬಾವುಟ ಹಿಡಿದು ನೃತ್ಯ ಮಾಡಿದ್ದ ಯುವಕನ ಮೇಲೆ ಪೊಲೀಸ್ ಅಧಿಕಾರಿ ಒಬ್ಬರು ಹಲ್ಲೆ ನಡೆಸಿದ್ದಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದಾಗಿ ವಿದ್ಯಾರ್ಥಿ ಆರೋಪ ಕುರಿತು ನ್ಯಾಯ ಸಿಗುವ ವಿಶ್ವಾಸವನ್ನು ಕರವೇ ನಾರಾಯಣಗೌಡ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಇವರು. ಕನ್ನಡ ಯುವಕನ ಮೇಲೆ ಪೊಲೀಸ್ ಅಧಿಕಾರಿ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಈಗಾಗಲೇ ಎಡಿಜಿಪಿ ಅಲೋಕ್ ಕುಮಾರ್ ಗಮನಕ್ಕೆ ತರಲಾಗಿದೆ. ಅವರು ಸೂಕ್ತ ತನಿಖೆ ನಡಿಸಿ ಕ್ರಮ ಕೈಗೊಳ್ಳುವ ಬರವಸೆ ಮೀಡಿದ್ದು ಈ ಕುರಿತು ಒತ್ತಡ ಹೇರುವುದನ್ನು ಮುಂದುವರಿಸುತ್ತೇವೆ ಎಂದರು.