ನಾಡದ್ರೋಹಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರವೇ ಪ್ರತಿಭಟನೆ
ಬೆಳಗಾವಿ : ಅನಗೋಳದಲ್ಲಿ ಧರ್ಮವೀರ ಸಂಭಾಜಿ ಮಹಾರಾಜರ ಪ್ರತಿಮೆ ಅನಾವರಣ ಸಂದರ್ಭದಲ್ಲಿ ನಾಡವಿರೋಧಿ ಘೋಷಣೆ ಕೂಗಿರುವವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು, ಬೆಳಗಾವಿ ಮಹಾನಗರ ಪಾಲಿಕೆಯನ್ನು ವಜಾಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಗುರುವಾರ ನಗರದ ಚನ್ನಮ್ಮ ವೃತ್ತದಿಂದ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಕರವೇ ಸದಸ್ಯರು ಬೆಳಗಾವಿ ಮಹಾನಗರ ಪಾಲಿಕೆಗೆ ಮತ್ತಿಗೆ ಹಾಕಲು ಯತ್ನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ, ಕರ್ನಾಟಕದಲ್ಲಿ ಕನ್ನಡಿಗರೇ ಸಾರ್ವಭೌಮರು. ಕಳೆದ ಭಾನುವಾರ ಅನಗೋಳದಲ್ಲಿ ನಡೆದ ಮೂರ್ತಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರಕ್ಕೆ ಜೈಕಾರ ಹಾಕುವ ಮೂಲಕ ನಾಡವಿರೋಧಿ ಕೃತ್ಯ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಪ್ರಕರಣ ಕುರಿತು ತಿಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಲಿಸಿದ್ದರು ಈವರೆಗೂ ಆರೋಪಿಗಳನ್ನು ಬಂಧಿಸಿಲ್ಲ. ಸರ್ಕಾರ ಕೂಡಲೇ ನಾಡವಿರೋಧಿ ಹೇಳಿಕೆ ನೀಡಿದವರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಅಷ್ಟೇ ಇಲ್ಲದೆ ಬೆಳಗಾವಿ ಮಹಾನಗರ ಪಾಲಿಕೆ ಆಡಳಿತ ಸಮಿತಿಯನ್ನು ಕೂಡಲೇ ವಜಾ ಮಾಡುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸುರೇಶ್ ಗವನ್ನವರ,ಗಣೇಶ ರೋಖಡೆ,
ರಾಜು ನಾಶಿಪುಡಿ, ದಶರಥ ಬನೋಶಿ, ಬಾಳು ಜಡಗಿ, ಕೃಷ್ಣಾ ಖಾನಪ್ಪಣ್ಣವರ, ಬಸವರಾಜ ಅವರೊಳ್ಳಿ, ಮಹೇಶ್ ಹಟ್ಟಿಹೋಳಿ, ಆರೋಗ್ಯಪ್ಪಾ ಪಾದನಕಟ್ಟಿ, ಸುಧೀರ ಪಾಟೀಲ,
ಸತೀಶ ಗುಡದವರ, ಉದಯ ಚಿಕ್ಕಣ್ಣವರ, ವಿಠಲ ಕಡಕೋಳ, ರುದ್ರಗೌಡ ಪಾಟೀಲ, ಸುರೇಶ ಮರಗೋಡ, ಹೊಳೇಪ್ಪಾ ಸುಲಧಾಳ, ಬಸವರಾಜ ದೂಳಪ್ಪಗೋಳ, ರಮೇಶ್ ಯರಗಣ್ಣವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.