RAICHUR : ಜೆಡಿಎಸ್ ಶಾಸಕಿ ಕಾರು ಅಪಘಾತ..ತಲೆಗೆ ಗಂಭೀರ ಪೆಟ್ಟು..!
ರಾಯಚೂರು: ರಾಯಚೂರಿನ(Raichur) ದೇವದುರ್ಗ ವಿಧಾನಸಭಾ ಕ್ಷೇತ್ರದ ಶಾಸಕರಾದ ಕರೆಮ್ಮ ಜಿ. ನಾಯಕ್ (MLA Karemma G.Nayak) ಕಾರು ಅಪಘಾತಕ್ಕೀಡಾಗಿದೆ (Car Accident). ಲಿಂಗಸ್ಗೂರು ತಾಲೂಕಿನ ಗುರುಗುಂಟಾ ಬಳಿ ಅಪಘಾತ ಸಂಭವಿಸಿದೆ.
ಓವರ ಟೇಕ್ ಮಾಡಿದ್ದೇ ಅಪಘಾತಕ್ಕೆ ಕಾರಣ..!
ಈ ಘಟನೆಯಲ್ಲಿ ಶಾಸಕಿಯ ಕಾರು ಒವರ್‌ಟೇಕ್ ಮಾಡುತ್ತಿರುವಾಗ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿದೆ. ಈ ವೇಳೆ ಕಾರಿನಲ್ಲಿದ್ದ ಶಾಸಕಿಯು ತಲೆಗೆ ಗಂಭೀರವಾದ ಪೆಟ್ಟು ಬಿದ್ದಿದ್ದು, ತಕ್ಷಣವೇ ಲಿಂಗಸ್ಗೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಲಿಂಗಸೂರು ಸರ್ಕಾರಿ ಆಸ್ಪತ್ರೆಗೆ ಶಾಸಕಿ ಕರೆಮ್ಮ ಜಿ. ನಾಯಕ್ ದಾಖಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಈ ಘಟನೆಯು ರಾಯಚೂರು ಜಿಲ್ಲೆಯ ರಾಜಕೀಯ ಮತ್ತು ಸಾಮಾಜಿಕ ವಲಯಗಳಲ್ಲಿ ಆಘಾತವನ್ನು ಉಂಟುಮಾಡಿದೆ.
ಶಾಸಕಿಯ ತಲೆ ಗಂಭೀರ ಪೆಟ್ಟು..ಅಸ್ಪತ್ರೆಗೆ ದಾಖಲು..!
ದೇವದುರ್ಗದಿಂದ ರಾಯಚೂರಿನತ್ತ ಶಾಸಕಿ ಕರೆಮ್ಮ ಜಿ. ನಾಯಕ್ ಹೋಗುತ್ತಿದ್ದ ಸಂದರ್ಭದಲ್ಲಿ ಅವರೊಂದಿಗೆ ಕೆಲವು ಸಹಾಯಕರು ಮತ್ತು ಚಾಲಕರೂ ಇದ್ದರು. ಲಿಂಗಸ್ಗೂರು ತಾಲೂಕಿನ ಗುರುಗುಂಟಾ ಗ್ರಾಮದ ಬಳಿ, ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಮತ್ತೊಂದು ವಾಹನವನ್ನು ಒವರ್‌ಟೇಕ್ ಮಾಡುವ ಪ್ರಯತ್ನದಲ್ಲಿ ಕಾರು ವೇಗವಾಗಿ ಮುಂದೆ ಸಾಗಿತ್ತು.
ಆದರೆ, ಮುಂದೆ ಬೇರೆ ವಾಹನ ಇದ್ದಿದ್ದರಿಂದ ತಕ್ಷಣ ಬ್ರೇಕ್ ಹಾಕಿದ್ದಕ್ಕೆ ಚಾಲಕ ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ. ಈ ವೇಳೆ ಶಾಸಕಿ ತಲೆಗೆ ಗಾಯವಾಗಿದೆ. ಸ್ಥಳೀಯರು ತಕ್ಷಣವೇ ಶಾಸಕಿಯನ್ನು ತಕ್ಷಣ ಲಿಂಗಸ್ಗೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ವೈದ್ಯರು ಶಾಸಕಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಚಾಲಕನಿಗೂ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಘಟನೆಯ ಸ್ಥಳಕ್ಕೆ ಲಿಂಗಸ್ಗೂರು ಪೊಲೀಸ್ ಇನ್‌ಸ್ಪೆಕ್ಟರ್ ಮತ್ತು ಸ್ಥಳೀಯ ತಹಶೀಲ್ದಾರ್ ಆಗಮಿಸಿ, ತನಿಖೆ ಪ್ರಾರಂಭಿಸಿದ್ದಾರೆ. ಪೊಲೀಸ್ ಪ್ರಕಾರ, ಚಾಲಕನ ವೇಗ ಮಿತಿ ಮೀರಿದ್ದು ಮುಖ್ಯ ಕಾರಣವಾಗಿದೆ. ಇಲ್ಲಿ ಆಗಾಗ ಅಪಘಾತಗಳು ನಡೆಯುತ್ತಿವೆ ಎಂದು ಸ್ಥಳೀಯರು ಆಕ್ಷೇಪಿಸುತ್ತಾರೆ.
ಅಪಘಾತದ ನಂತರ ಶಾಸಕಿ ಕರೆಮ್ಮ ಜಿ. ನಾಯಕ್ ಅವರನ್ನು ತಕ್ಷಣ ಲಿಂಗಸ್ಗೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ತಲೆಗೆ ಬಿದ್ದ ಪೆಟ್ಟಿಗೆ ಚಿಕಿತ್ಸೆ ನೀಡಲಾಯ್ತು. ಸದ್ಯ ಅವರ ಆರಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಶಾಸಕಿ ಕರೆಮ್ಮ ಬೆಂಬಲಿಗರು ಅವರ ಆರೋಗ್ಯ ಸುಧಾರಣೆಗಾಗಿ ಪ್ರಾರ್ಥಿಸುತ್ತಿದ್ದಾರೆ.


