ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಇದರೊಂದಿಗೆ ಹಾಲಿ ರಾಜ್ಯಪಾಲರಾಗಿದ್ದ ಥಾವರ್‌ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿಯು ಮುಕ್ತಾಯವಾಗಿದ್ದು, ರಾಜ್ಯದ ಲೋಕಭವನಕ್ಕೆ ಹೊಸ ಸಾಂವಿಧಾನಿಕ ಮುಖ್ಯಸ್ಥರ ಆಗಮನವಾಗಲಿದೆ.
ಕರ್ನಾಟಕ ಸೇರಿ ಒಟ್ಟು ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ. ಕಳೆದ ಕೆಲ ವರ್ಷಗಳಿಂದ ರಾಜ್ಯದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದ ಥಾವರ್‌ಚಂದ್ ಗೆಹ್ಲೋಟ್ ಅವರ ಜಾಗಕ್ಕೆ ಇದೀಗ ಸುಧಾ ಯಾದವ್ ಅವರನ್ನು ನಿಯೋಜಿಸಲಾಗಿದೆ.
ಆದರೆ, ಹುದ್ದೆಯಿಂದ ನಿರ್ಗಮಿಸುತ್ತಿರುವ ಗೆಹ್ಲೋಟ್ ಅವರಿಗೆ ಕೇಂದ್ರ ಸರ್ಕಾರವಾಗಲಿ ಅಥವಾ ರಾಷ್ಟ್ರಪತಿ ಭವನವಾಗಲಿ ಮುಂದಿನ ಯಾವುದೇ ಹೊಣೆಗಾರಿಕೆಯನ್ನು ಸದ್ಯಕ್ಕೆ ನಿಗದಿಪಡಿಸಿಲ್ಲ. ನೂತನ ರಾಜ್ಯಪಾಲರಾಗಿ ನಿಯೋಜನೆಗೊಂಡಿರುವ ಸುಧಾ ಯಾದವ್ ಅವರು ಶೀಘ್ರದಲ್ಲೇ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.





