
ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ ಕೋಟಿ ಒಡೆಯ ; ಮೂವರೂ ಅಧಿಕಾರಿಗಳು ಕೋಟಿ ಕುಳಗಳು..!

ಬೆಳಗಾವಿ : ಜಿಲ್ಲೆಯ ಮೂವರು ಅಧಿಕಾರಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಮಹತ್ವದ ದಾಖಲೆ ವಶಪಡಿಸಿಕೊಂಡಿದ್ದಾರೆ. ಸಧ್ಯ ದಾಳಿಗೊಳಗಾದ ಮೂವರು ಕೋಟಿ ಕುಳಗಳು ಎಂದು ತಿಳಿದುಬಂದಿದೆ.
ನಿಪ್ಪಾಣಿ ತಾಲೂಕಿನ ಬೋರಗಾಂವ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ ಡವಳೇಶ್ವರ, ಧಾರವಾಡ ಕೆಐಎಡಿಬಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಗೋವಿಂದಪ್ಪ ಭಜಂತ್ರಿ ಅವರ ಸವದತ್ತಿಯ ಎರಡು ಮನೆ ಹಾಗೂ ವಾಣಿಜ್ಯ ತೆರಿಗೆ ಇಲಾಖೆ ಉಪ ಆಯುಕ್ತ ವೆಂಕಟೇಶ ಮಜುಂದಾರ್ ಅವರ ಬೆಳಗಾವಿ ನಗರದ ಮನೆ ಮೇಲೆ ಲೋಕಾಯುಕ್ತ ಎಸ್ಪಿ ಹಣಮಂತರಾಯ ನೇತೃತ್ವದ ತಂಡ ದಾಳಿ ನಡೆಸಿತ್ತು.
ಲೋಕಾಯುಕ್ತ ಅಧಿಕಾರಿಗಳು ನೀಡಿದ ಮಾಹಿತಿ ಅನ್ವಯ. ವಿಠ್ಠಲ ಶಿವಪ್ಪ ಧವಳೇಶ್ವರ್, ಗ್ರಾಮ ಆಡಳಿತಾಧಿಕಾರಿ, ಬೋರೆಗಾವ್ ಗ್ರಾಮ, ನಿಪ್ಪಾಣಿ ತಾಲ್ಲೂಕು,
ಬೆಳಗಾವಿ ಜಿಲ್ಲೆ. ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 4 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುದಿರುತ್ತದೆ.
ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 1 ವಾಸದ ಮನೆ, 4 ಎಕರೆ ಕೃಷಿ ಜಮೀನು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ : 1,00,50,000/- , ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 1,55,195/- ನಗದು, ರೂ. 3,02,049/- , ಬೆಲೆ ಬಾಳುವ ಚಿನ್ನಾಭರಣಗಳು, ರೂ 3,45,000/- ಬೆಲೆ ಬಾಳುವ ವಾಹನಗಳು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 8,02,244/- , ಒಟು ಮೌಲ್ಯ- ರೂ. 1,08,52,244/-
ಗೋವಿಂದಪ್ಪ ಹನುಮಂತಪ್ಪ ಭಜಂತ್ರಿ, ಸಹಾಯಕ ಕಾರ್ಯದರ್ಶಿ, ಕೆ.ಐ.ಎ.ಡಿ.ಬಿ, ಲಕ್ಕಮನಹಳ್ಳಿ, ಧಾರವಾಡ ಜಿಲ್ಲೆ. ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 7 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.
ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 3 ನಿವೇಶನಗಳು, 1 ವಾಸದ ಮನೆ, 7 ಎಕರೆ 26 ಗುಂಟೆ ಕೃಷಿ ಜಮೀನು. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 1,85,00,000/- , ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 41,11,000/- ನಗದು, ರೂ 27,11,300/- , ಬೆಲೆ ಬಾಳುವ ಚಿನ್ನಾಭರಣಗಳು, ರೂ. 20,00,000/- ಬೆಲೆಬಾಳುವ ವಾಹನಗಳು, ರೂ.
6,00,000/- ಬೆಲೆಬಾಳುವ ಇತರೆ ವಸ್ತುಗಳು. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 94,22,300/-., ಒಟು ಮೌಲ್ಯ- ರೂ 2,79,22,300/
ವೆಂಕಟೇಶ್ ಎಸ್ ಮುಜುಮ್ದಾರ್, ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆ, ಕೋರಮಂಗಲ, ಬೆಂಗಳೂರು. ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 5 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.
ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 2 ವಾಸದ ಮನೆಗಳು, 1 ಗ್ಯಾಸ್ ಗೋಡೌನ್, 1 ಎಕರೆ ಕೃಷಿ ಜಮೀನು. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 1,63,00,000/- ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 1,42,000/- ನಗದು, ರೂ. 39,31,900/- ಬೆಲೆ ಬಾಳುವ ಚಿನ್ನಾಭರಣಗಳು, ರೂ 17,70,000/- ಬೆಲೆಬಾಳುವ ವಾಹನಗಳು. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 58,43,900/-, ಒಟು ಮೌಲ್ಯ- ರೂ. 2,21,43,900/