ರಾಜ್ಯದಲ್ಲಿ ಮಹತ್ವದ ಬೆಳವಣಿಗೆ ; ಪಕ್ಷಾತೀತವಾಗಿ 56 ಶಾಸಕರು ಸಭೆ
ಬೆಂಗಳೂರು : ಸಿಎಂ ಬದಲಾವಣೆ ಚರ್ಚೆ ಮಧ್ಯೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಸುಮಾರು 56 ಕ್ಕೂ ಅಧಿಕ ಶಾಸಕರು ಪ್ರತ್ಯೇಕ ಸಭೆ ನಡೆಸಿದ್ದು ಕುತೂಹಲ ಮೂಡಿದೆ.
ಮಂಗಳವಾರ ರಾತ್ರಿ ಶಾಸಕರ ಸಭೆ ನಡೆದಿದ್ದು ಲಿಂಗಾಯತ, ಒಕ್ಕಲಿಗ ಸಮುದಾಯದ ಶಾಸಕರು ಸೇರಿದಂತೆ ಇನ್ನುಳಿದ ಅನೇಕರು ಸಭೆಯಲ್ಲಿ ಭಾಗವಹಿಸಿದ್ದರು. ಔತನಕೂಟದ ಹೆಸರಿನಲ್ಲಿ ಶಾಸಕರು ಸಭೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಚಿವ ಸಂತೋಷ್ ಲಾಡ್, ಶಾಸಕ ಶರಣಗೌಡ ಕಂದಕೂರು, ಶಿವಗಂಗಾ ಬಸವರಾಜ ಸೇರಿದಂತೆ ಅನೇಕ ಶಾಸಕರು ಭಾಗವಹಿಸಿದ್ದು ತೀವ್ರ ಕುತೂಹಲ ಮೂಡಿಸಿದೆ.


