ಚುನಾವಣೆ ಹೊತ್ತಲ್ಲೇ ಬಿಜೆಪಿ ಮಾಜಿ ಸಚಿವರದ್ದು ಎನ್ನಲಾದ ಅಶ್ಲೀಲ ಪೋಟೋ ವೈರಲ್
ಬೆಂಗಳೂರು : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದ್ದು ಈ ಬೆನ್ನಲ್ಲೇ ಬಿಜೆಪಿ ಮಾಜಿ ಸಚಿವರೊಬ್ಬರ ಅಶ್ಲೀಲ ಪೋಟೋ ವೈರಲ್ ಆಗಿದ್ದು ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದೆ.
ಹೌದು ಇವರು ಬೆಂಗಳೂರಿನ ಹೆಬ್ಬಾಳ ಕ್ಷೇತ್ರದ ಪ್ರಬಲ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದರು. ಈ ಹಿಂದೆ ಬಿಜೆಪಿಯಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅಶ್ಲೀಲ ಪೋಟೋ ಸೋಶಿಯಲ್ ಮೀಡಿಯಾದಲ್ಲಿ ಬಾರಿ ವೈರಲ್ ಆಗುತ್ತಿವೆ.
ಕಳೆದ ಎರಡು ದಿನಗಳ ಹಿಂದೆಯಷ್ಟೇ ಪುತ್ತೂರು ಬಿಜೆಪಿ ಶಾಸಕ ಸಂಜೀವ್ ಮಠಂದೂರು ಅವರ ಅಶ್ಲೀಲ ಪೋಟೋ ವೈರಲ್ ಆಗಿತ್ತು. ಈಗ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರದ್ದೇ ಎನ್ನಲಾದ ಅಶ್ಲೀಲ ಪೋಟೋ ಸಧ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.