Breaking : ಸಚಿವ ಉಮೇಶ್ ಕತ್ತಿಗೆ ಹೃದಯಾಘಾತ : ಆಸ್ಪತ್ರೆಗೆ ದಾಖಲು
ಬೆಂಗಳೂರು : ತೀವ್ರ ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ಅವರನ್ನು ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನ ತಮ್ಮ ಮನೆಯಲ್ಲಿ ಇದ್ದ ಸಂದರ್ಭದಲ್ಲಿ ಮಂಗಳವಾರ ರಾತ್ರಿ ಹತ್ತು ಗಂಟೆಗೆ ಹೃದಯಾಘಾತ ಸಂಭವಿಸಿದೆ.
ಹೃದಯ ನೋವಿನಿಂದ ಕುಸಿದು ಬಿದ್ದ ಉಮೇಶ್ ಕತ್ತಿ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಘಟನೆ ತಿಳಿಯುತ್ತಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಉಳಿದ ಸಚಿವರು ಎಮ್ ಎಸ್ ರಾಮಯ್ಯ ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ.