VIDEO : ಸಹೋದರನನ್ನು ನೆನೆದು ಬಿಕ್ಕಿ ಬಿಕ್ಕಿ ಕಣ್ಣೀರು ಹಾಕುತ್ತಿರುವ ರಮೇಶ್ ಕತ್ತಿ
ಹುಕ್ಕೇರಿ : ಸಚಿವ ದಿ. ಉಮೇಶ್ ಕತ್ತಿ ನಿಧನರಾಗಿ ಮೂರು ದಿನ ಕಳೆದಿದೆ. ಸಾವಿರಾರು ಅಭಿಮಾನಿಗಳು ನಾಯಕನ ಅಗಲಿಕೆಯ ನೋವಿನಿಂದ ಕತ್ತಿ ಸಾಹುಕಾರ್ ಮನೆಗೆ ಹೆಜ್ಜೆ ಹಾಕುತ್ತಿದ್ದಾರೆ. ಆದರೆ ಸಹೋದರ ರಮೇಶ್ ಕತ್ತಿ ಮಾತ್ರ ಈಗಲೂ ಉಮೇಶ್ ಕತ್ತಿ ಅಗಲಿಕೆಯನ್ನು ಅರಗಿಸಿಕೊಂಡಿಲ್ಲ. ಅವರ ನೆನಪಿನಲ್ಲಿ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕುತ್ತಿದ್ದಾರೆ.
ಹೌದು ಹೃದಯಾಘಾತದಿಂದ ನಿಧನರಾದ ಸಚಿವ ಉಮೇಶ್ ಕತ್ತಿ ಮನೆಗೆ ಅನೇಕ ರಾಜಕೀಯ ಮುಖಂಡರು ಹಾಗೂ ಸಾವಿರಾರು ಅಭಿಮಾನಿಗಳು ಭೇಟಿ ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿ ಸಹೋದರನನ್ನು ನೆನೆದು ಮಾಜಿ ಸಂಸದ ರಮೇಶ್ ಕತ್ತಿ ಕಣ್ಣೀರು ಹಾಕುತ್ತಿರುವ ದೃಶ್ಯ ಎಂತವರ ಮನ ಕಲಕಿಸುವಂತಿದೆ. ಅಷ್ಟೇ ಅಲ್ಲದೆ ಆ ನೋವನ್ನು ಅವರು ಕಾರ್ಯಕರ್ತರ ಮುಂದೆ ಹೊರ ಹಾಕುತ್ತಿದ್ದಾರೆ.
***************************
ಉಮೇಶ್ ಕತ್ತಿ ಸಮಾಧಿಗೆ ವಿಧಿ ವಿಧಾನಗಳ ಮೂಲಕ ಪೂಜೆ, ಗುಟ್ಕಾ ಪ್ಯಾಕೆಟ್ ಇಟ್ಟು ಸಂಪ್ರದಾಯ ಪಾಲನೆ
ಹೃದಯಾಘಾತದಿಂದ ಸಾವನ್ನಪ್ಪಿದ ಉಮೇಶ್ ಕತ್ತಿ ಸಮಾಧಿಗೆ ಕುಟುಂಬಸ್ಥರು ಪೂಜೆ ನೆರವೇರಿಸಿ ಅಂತಿಮ ವಿಧಿ ವಿಧಾನವನ್ನು ಇಂದು ಪೂರೈಸಿದರು
ನಿನ್ನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ಗದ್ದೆಯಲ್ಲಿ ತಂದೆ ತಾಯಿ ಸಮಾಧಿ ಪಕ್ಕವೇ ಅವರ ಅಂತ್ಯಕ್ರಿಯೆ ನಡೆದಿತ್ತು. ಸಮಾಧಿಗೆ ತೆರಳಿ ಪುತ್ರ ನಿಖಿಲ್ ಕತ್ತಿ, ಅಳಿಯ ನಿತಿನ್ ಪ್ರಭುದೇವ ಅವರು ಪುರೋಹಿತರ ಮಾರ್ಗದರ್ಶನದಂತೆ ಪೂಜೆ ಸಲ್ಲಿಸಿದರು.
ಸಮಾಧಿಗೆ ಪೂಜೆ ಮಾಡಿ ಸಮಾಧಿಯ ಮೇಲೆ ಅವರಿಷ್ಟದ ತಿಂಡಿ, ತಿನಿಸುಗಳನ್ನು ಇಡಲಾಯಿತು. ಜೊತೆಗೆ ಸಮಾಧಿ ಮೇಲೆ ಅವರಿಗೆ ಇಷ್ಟವಾದ ಗುಟ್ಕಾ ಪ್ಯಾಕೇಟ್ ಇಟ್ಟು ನಮನ ಸಲ್ಲಿಸಲಾಯಿತು. ಇಂದು ಕೂಡ ಅವರ ಮನೆಗೆ ಅಭಿಮಾನಿಗಳು ದಂಡೇ ಹರಿದು ಬರುತ್ತಿದೆ
ಮಂಗಳವಾರ ಹೃದಯ ಸ್ತಂಭನದಿಂದ ಆಸ್ಪತ್ರೆ ಸೇರಿದ್ದ ಆಹಾರ, ಅರಣ್ಯ ಸಚಿವ ಉಮೇಶ್ ಕತ್ತಿ ಅವರು ಕೊನೆಯುಸಿರೆಳೆದಿದ್ದಾರೆ. ಸಚಿವರ ಅಗಲಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪವನ್ನು ಸೂಚಿಸಿದ್ದಾರೆ.