ಬೆಂಗಳೂರು : ತೀವ್ರ ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ನಿಧನರಾಗಿದ್ದಾರೆ.
ಬೆಂಗಳೂರಿನ ತಮ್ಮ ಮನೆಯಲ್ಲಿ ಇದ್ದ ಸಂದರ್ಭದಲ್ಲಿ ಮಂಗಳವಾರ ರಾತ್ರಿ ಹತ್ತು ಗಂಟೆಗೆ ಹೃದಯಾಘಾತ ಉಂಟಾಗಿದೆ. ಹೃದಯ ನೋವಿನಿಂದ ಕುಸಿದು ಬಿದ್ದ ಉಮೇಶ್ ಕತ್ತಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಉಸಿರು ಚೆಲ್ಲಿದ್ದಾರೆ.