Select Page

ನೂತನ ಅಂಗನವಾಡಿ ಕಟ್ಟಡ ಉದ್ಘಾಟಿಸಿದ ಶಾಸಕ ಕೌಜಲಗಿ

ನೂತನ ಅಂಗನವಾಡಿ ಕಟ್ಟಡ ಉದ್ಘಾಟಿಸಿದ ಶಾಸಕ ಕೌಜಲಗಿ

ಬೈಲಹೊಂಗಲ :  ತಾಲೂಕಿನ ಸಿದ್ಧಸಮುದ್ರ ಗ್ರಾಮದಲ್ಲಿ ನಬಾರ್ಡ್ ಯೋಜನೆ ಅಡಿಯಲ್ಲಿ ಅಂದಾಜು 17 ಲಕ್ಷ ರೂಪಾಯಿ ಗಳಲ್ಲಿ ನಿರ್ಮಾಣವಾದ ಅಂಗನವಾಡಿ ಕಟ್ಟಡದ  ಉದ್ಘಾಟನೆಯನ್ನು ಜ್ಯೋತಿ ಬೆಳಗಿಸುವುದರ ಮೂಲಕ ಶಾಸಕ ಮಹಾಂತೇಶ ಕೌಜಲಗಿ ನೆರವೇರಿಸಿದರು. 

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಇವರು. ದೇಶದ ಆಸ್ತಿಯಾದ  ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ ಅವರನ್ನು ದೇಶಪ್ರೇಮಿ ಗಳನ್ನಾಗಿ ರೂಪಿಸುವ ಮಹತ್ವ ಕಾರ್ಯವನ್ನು ಶಿಕ್ಷಕರು ಮತ್ತು ಪೋಷಕರು ಮಾಡಬೇಕು. ಸರ್ಕಾರ ನೀಡುವ ಪೌಷ್ಟಿಕ ಆಹಾರವನ್ನು ಗರ್ಭಿಣಿಯರಿಗೆ ಹಾಗೂ ಮಕ್ಕಳಿಗೆ ತಲುಪಿಸುವ ಪ್ರಾಮಾಣಿಕ ಕೆಲಸ ಮಾಡಬೇಕು ಎಂದರು.

ಸಿಡಿಪಿಓ ಶ್ರೀಮತಿ ರೇವತಿ ಹೊಸಮಠ ಮಾತನಾಡಿ. ಸಿದ್ಧಸಮುದ್ರ ಗ್ರಾಮದಲ್ಲಿ ಮಕ್ಕಳು ಮತ್ತು ಗರ್ಭಿಣಿಯರ ಸಂಖ್ಯೆ ಹೆಚ್ಚಿದ್ದು ಈಗಾಗಲೇ ಸರ್ಕಾರದಿಂದ ಭಾಗ್ಯಲಕ್ಷ್ಮಿ, ಸುಕನ್ಯಾ ಸಮೃದ್ಧಿ, ಮಾತೃ ವಂದನಾ ಯೋಜನೆಗಳ ಸದುಪಯೋಗ ಪಡೆದುಕೊಳ್ಳಲಾಗುತ್ತಿದೆ‌. ಮುಂದೆ ಬರುವ  ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದರು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಈರಣ್ಣ ಕರೀಕಟ್ಟಿ , ತಾಲೂಕು ಪಂಚಾಯತ್ ಸದಸ್ಯ. ಕಕ್ಕಯ್ಯನವರ. ಗ್ರಾಮ ಪಂಚಾಯತ್  ಉಪಾಧ್ಯಕ್ಷ ಸಿದ್ದಪ್ಪ ನಂದಿಹಳ್ಳಿ, ಗ್ರಾಮ ಪಂಚಾಯತ್ ಸದಸ್ಯರು ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಮತ್ತು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement

Leave a reply

Your email address will not be published. Required fields are marked *

error: Content is protected !!