ಖಾನಾಪುರದಲ್ಲಿ ಗುಂಡಿನ ಸದ್ದು ; ಯುವಕ ಸಾವು
ಖಾನಾಪುರ : ತಾಲೂಕಿನಲ್ಲಿ ತಡರಾತ್ರಿ ಗುಂಡಿನ ಸದ್ದು ಮೊಳಗಿದ್ದು ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ.
ತಾಲೂಕಿನ ಹಲಸಿ – ಬೇಕವಾಡ ರಸ್ತೆಯ ನರಸೇವಾಡಿ ಬ್ರಿಡ್ಜ್ ಬಳಿ ರಾತ್ರಿ 3 ಗಂಟೆಗೆ ನಡೆದ ಗುಂಡಿನ ದಾಳಿ ನಡೆದಿದ್ದು ಘಟನೆಯಲ್ಲಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಹಲಸಿಯ ಯುವಕ ಅಲ್ತಾಫಗೌಸ್ ಮಕಾಂದರ್ ( 27 ) ಮೃತಪಟ್ಟ ಯುವಕ. ಈತನ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಡನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರುತಿ, ಉಪ ಪೊಲೀಸ್ ವರಿಷ್ಠಾಧಿಕಾರಿ ರವಿ ನಾಯಕ್, ನಂದಗಡ ಪೊಲೀಸ್ ನಿರೀಕ್ಷಕ ಎಸ್. ಸಿ. ಪಾಟೀಲ್ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.


