
ಲೋಕಾಯುಕ್ತ ಬಲೆಗೆ ಬಿದ್ದ ಖಾನಾಪುರ ತಹಶಿಲ್ದಾರ

ಬೆಳಗಾವಿ : ನೂರಾರು ಎಕರೆ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳ ಹೆಸರಿಗೆ ಮಾಡಿದ ಆರೋಪ ಹಾಗೂ ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಖಾನಾಪುರ ತಹಶಿಲ್ದಾರ ಪ್ರಕಾಶ ಗಾಯಕವಾಡ ಅವರ ಗಣೇಶಪುರ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳ್ಳಂ ಬೆಳಗ್ಗೆ ದಾಳಿ ಮಾಡಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಬೆಳಗಾವಿ ಜಿಲ್ಲೆಯ ರಾಯಬಾಗ ಹಾಗೂ ಖಾನಾಪುರ ತಾಲೂಕಿನಲ್ಲಿ ಸುಮಾರು 762 ಎಕರೆ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಿರುವ ಆರೋಪವನ್ನು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ್ ಮಾಡಿದ್ದರು.
ಪ್ರಕಾಶ ಗಾಯಕವಾಡ ನಿಪ್ಪಾಣಿಯಲ್ಲಿರುವ ಮನೆ ಹಾಗೂ ಖಾನಾಪುರ ಕಚೇರಿ ಮೇಲೆ ದಾಳಿ ಅಧಿಕಾರಿಗಳ ದಾಳಿ ಮಾಡಿದ್ದು ಬೆಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಭಯ ಬೀತರಾರದರು.
ಬೆಳಗಾವಿ ಎಸ್ಪಿ ಹಣಮಂತರಾಯ್ ನೇತೃತ್ವದಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಲೋಕಾಯುಕ್ತ ಡಿವೈಎಸ್‌ಪಿ ಪುಷ್ಪಲತಾ, ಪಿಐ ನಿರಂಜನ್ ಪಾಟೀಲ ದಾಳಿಯಲ್ಲಿ ಭಾಗಿಯಾಗಿದ್ದಾರೆ.