Video – ಪೊಲೀಸರ ಕಾರ್ಯವೈಖರಿ ವಿರುದ್ಧ ಠಾಣೆಯಲ್ಲೇ ಶಾಸಕಿ ಅಂಜಲಿ ಗರಂ
ಖಾನಾಪುರ : ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಥಳಿಸಿದ ದುಷ್ಕರ್ಮಿಗಳನ್ನು ಬಂಧಿಸುವಲ್ಲಿ ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿ, ಖಾನಾಪುರ ಪೊಲೀಸ್ ಠಾಣೆಯಲ್ಲಿ ಕುಳಿತು ಅಧಿಕಾರಿಗಳ ವಿರುದ್ಧ ಶಾಸಕಿ ಅಂಜಲಿ ನಿಂಬಾಳ್ಕರ್ ಆಕ್ರೋಶ ಹೊರ ಹಾಕಿದ ಘಟನೆ ನಡೆದಿದೆ.
ವಾರಕರಿ ಪಂಗಡದೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಖಾನಾಪುರ ವೃದ್ಧನ ಮೇಲೆ ಬುಧವಾರ ರಾತ್ರಿ ಕಬ್ಬಿಣದ ಸಲಾಕೆಯಿಂದ ಥಳಿಸಿದ್ದ ಘಟನೆ ಬೆಳಕಿಗೆ ಬಂದಿತ್ತು. ಆದರೆ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳದೆ ಪೊಲೀಸ್ ಇಲಾಖೆ ಅಧಿಕಾರಿಗಳ ಕ್ರಮಕ್ಕೆ ಸ್ವತಃ ಶಾಸಕಿ ಅಂಜಲಿ ನಿಂಬಾಳ್ಕರ್ ಗರಂ ಆಗಿದ್ದಾರೆ. ಗುರುವಾರ ಖಾನಾಪುರ ಪೊಲೀಸ್ ಠಾಣೆಗೆ ಆಗಮಿಸಿದ್ದ ಶಾಸಕಿ ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡರು. ಅಷ್ಟೇ ಅಲ್ಲದೆ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಚ್ಚರಿಕೆ ನೀಡಿದರು.