Belagavi Update – ಟ್ರ್ಯಾಕ್ಟರ್ ಪಲ್ಟಿಯಾಗಿ ರೈತ ಸ್ಥಳದಲ್ಲೇ ಸಾವು
ಖಾನಾಪುರ : ಭತ್ತದ ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದ ಸಂದರ್ಭದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ರೈತ ಸ್ಥಖದಲ್ಲೇ ಮೃತಪಟ್ಟ ಘಟನೆ ಖಾನಾಪುರ ತಾಲೂಕಿನ ಕ್ರಿಶ್ಚಿಯನ್ ವಾಡಾ ಗ್ರಾಮದಲ್ಲಿ ಮಂಗಳವಾರ ಜರುಗಿದೆ.
ಭತ್ತದ ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದ ನಿವೃತ್ತ ಶಿಕ್ಷಕ ಪಾಂಡುರಂಗ ಲಾಡಗವ್ಕರ್ ( 61 ) ಮೃತಪಟ್ಟ ವ್ಯಕ್ತಿ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ರೈತರು ಭತ್ತ ನಾಟಿ ಮಾಡುವುದು ಸಾಮಾನ್ಯವಾಗಿದೆ.
ಘಟನಾ ಸ್ಥಳಕ್ಕೆ ಖಾನಾಪುರ ಶಾಸಕ ವಿಟ್ಠಲ ಹಲಗೇಕರ್, ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.


