Select Page

Advertisement

ಕಿತ್ತೂರು ಕೊಲೆಗೆ ಟ್ವಿಸ್ಟ್ ; ವ್ಯಕ್ತಿಯ ಮರ್ಮಾಂಗ ಕತ್ತರಿಸಿ ಹತ್ಯೆ..!

ಕಿತ್ತೂರು ಕೊಲೆಗೆ ಟ್ವಿಸ್ಟ್ ; ವ್ಯಕ್ತಿಯ ಮರ್ಮಾಂಗ ಕತ್ತರಿಸಿ ಹತ್ಯೆ..!


ಕಿತ್ತೂರು : ವ್ಯಕ್ತಿಯೊಬ್ಬನ ಶವ ಕೋಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ ಎಂಬುದು ತಿಳಿದುಬಂದಿದೆ.

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿ ಕಲ್ಮೇಶ್ ಕೋಟಿ (50) ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದ್ದು, ಮೆಕ್ಕೆಜೋಳ ಗದ್ದೆಯಲ್ಲಿ ಶವ ಪತ್ತೆಯಾಗಿದೆ.

ನಾಲ್ಕು ದಿನಗಳ ಹಿಂದೆ ನಡೆದಿರುವ ಈ ಕೊಲೆ ತಡವಾಗಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದುಷ್ಕರ್ಮಿಗಳು ಕಲ್ಮೇಶ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದು, ಬಳಿಕ ಮರ್ಮಾಂಗ ಕತ್ತರಿಸಿ ವಿಕೃತಿ ಮೆರೆದಿರುವುದು ಬೆಳಕಿಗೆ ಬಂದಿದೆ.

ಹಣಕಾಸು, ಆಸ್ತಿ ಹಾಗೂ ಮಹಿಳೆ ಸಂಬಂಧಿತ ವಿಚಾರಗಳಿಗೆ ಕೊಲೆ ಆಗಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!