Video – ನಡು ರಸ್ತೆಯಲ್ಲಿ ಹೊತ್ತಿ ಉರಿದ ಲಾರಿ
ಕಿತ್ತೂರು ತಾಲೂಕಿನ ಪೆಟ್ರೋಲ್ ಬಂಕ್ ಬಳಿ ನಿಂತಿದ್ದ ತೆಂಗಿನಕಾಯಿ ತುಂಬಿಕೊಂಡ ಬಂದಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಲಾರಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಡೆದಿದೆ.
ಶನಿವಾರ ಸಂಜೆ ಕಿತ್ತೂರು ತಾಲೂಕಿನ ಶಿವಾ ಪೆಟ್ರೋಲ್ ಪಂಪ್ ಬಳಿ ಈ ಘಟನೆ ಸಂಭವಿಸಿದೆ. ಲಾರಿಯಲ್ಲಿ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿ ಕೆಲವೇ ಕ್ಷಣದಲ್ಲಿ ಇಡೀ ಲಾರಿಯನ್ನೇ ಆವರಸಿತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು.