ಕೊನೆಗೂ ಪತ್ತೆಯಾದ ಕಿತ್ತೂರು ಪಟ್ಟಣ ಪಂಚಾಯತಿ ಬಿಜೆಪಿ ಸದಸ್ಯ
ಬೆಳಗಾವಿ : ಚೆನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯತಿ ಬಿಜೆಪಿ ಸದಸ್ಯನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಾಜ ಅಸುಂಡಿ ಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಪಟ್ಟಣ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ನಿಂದ ಬಿಜೆಪಿ ಸದಸ್ಯನ ಅಪಹರಣ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.
ಸಧ್ಯ ನಾಗರಾಜ ಅಸೂಂಡಿ ಅವರನ್ನು ಬೈಲಹೊಂಗಲ ಕೋರ್ಟ್ ಗೆ ಹಾಜರುಪಡಿಸಲಾಗಿದೆ. ಹೇಳಿಕೆ ಪಡೆದುಕೊಂಡ ನಂತರ ಬಿಡುಗಡೆ ಸಾಧ್ಯತೆ ಇದೆ.