ಕಿತ್ತೂರು ಉತ್ಸವ ನಾಳೆಗೆ ಮುಂದೂಡಿಕೆ – ಡಿಸಿ ಸೂಚನೆ
ಚನ್ನಮ್ಮನ ಕಿತ್ತೂರಿನಲ್ಲಿ ಇಂದು ನಡೆಯಬೇಕಿದ್ದ ಕಿತ್ತೂರು ಉತ್ಸವವನ್ನು ನಾಳೆ ಸೋಮವಾರ(ಅ.24)ಕ್ಕೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.
ಸವದತ್ತಿ ಶಾಸಕ ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ಆನಂದ ಮಾಮನಿ ಅವರ ನಿಧನದ ಹಿನ್ನಲೆ ಇಂದು ನಡೆಯಬೇಕಿದ್ದ ಐತಿಹಾಸಿಕ ಕಿತ್ತೂರು ಉತ್ಸವವನ್ನು ನಾಳೆಗೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.