ಕಿತ್ತೂರು ಉತ್ಸವ : ಮಾಧ್ಯಮ ಸಮನ್ವಯ ಸಮಿತಿ ಸಭೆಗೆ ಪತ್ರಕರ್ತರ ಬಹಿಷ್ಕಾರ
ಚನ್ನಮ್ಮನ ಕಿತ್ತೂರು: ಚನ್ನಮ್ಮನ ಕಿತ್ತೂರು ಉತ್ಸವದ ಅಂಗವಾಗಿ ಅ. 15ರಂದು ಮುಂಜಾನೆ 11ಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಗುರುನಾಥ ಕಡಬೂರ ಅವರ ಅಧ್ಯಕ್ಷತೆಯಲ್ಲಿ ಇಲ್ಲಿಯ ಪ್ರವಾಸಿ ಮಂದಿರದಲ್ಲಿ ನಡೆಯಲಿರುವ ಮಾಧ್ಯಮ ಸಮನ್ವಯ ಸಮಿತಿ ಸಭೆಗೆ ಪತ್ರಕರ್ತರು ಬಹಿಷ್ಕಾರ ಹಾಕಿದ್ದಾರೆ.
ಪತ್ರಕರ್ತರು ಅಲ್ಲದ ಹೆಸರುಗಳನ್ನು ಈ ಸಮಿತಿಯಲ್ಲಿ ಪ್ರಕಟಿಸಲಾಗಿದೆ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಪತ್ರಕರ್ತರು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

