ಕೋಲಾರದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಸೇನಾ ಹೆಲಿಕಾಪ್ಟರ್
ಕೋಲಾರ : ತರಬೇತಿ ನಿಮಿತ್ತ ಹಾರಾಟ ನಡೆಸುತ್ತಿದ್ದ ಸೇನಾ ಹೆಲಿಕ್ಯಾಪ್ಟರ್ನಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದರಿಂದ ತುರ್ತಾಗಿ ಭೂಸ್ಪರ್ಶ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಡಿಕೆ ಹಳ್ಳಿಯಲ್ಲಿ ನಡೆದಿದೆ.
ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಹೆಲಿಕ್ಯಾಪ್ಟರ್ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಡಿಕೆ ಹಳ್ಳಿಯಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಡಿಕೆ ಹಳ್ಳಿ.
ಗ್ರಾಮದ ಕೆರೆ ಅಂಗಳದಲ್ಲಿ ಹೆಲಿಕಾಪ್ಟರ್ ತುರ್ತು ಸ್ಪರ್ಶ ಮಾಡಿದೆ. ಹೆಲಿಕ್ಯಾಪ್ಟರ್ ನಲ್ಲಿ ಇದ್ದ ಅಧಿಕಾರಿಗಳು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ತರಬೇತಿ ನಿಮಿತ್ಯ ಕೆಜಿಎಫ್ ಹಾಗೂ ಬಂಗಾರಪೇಟೆಯಲ್ಲಿ ಸೇನಾ ಹೆಲಿಕಾಪ್ಟರ್ ಹಾರಾಟ ನಡೆಸಿತ್ತು.


