ಕೊಲ್ಹಾಪುರ ಮಹಾಲಕ್ಷ್ಮಿ ದೇವಿ ದರ್ಶನ ಪಡೆದ ರಾಜ್ಯಪಾಲ ಗೆಹ್ಲೋಟ್
ಕೊಲ್ಹಾಪುರ : ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಜೊತೆಗಿನ ಮಹತ್ವದ ಭೇಟಿಗೆ ಕೊಲ್ಹಾಪುರಕ್ಕೆ ಆಗಮಿಸಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶುಕ್ರವಾರ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದುಕೊಂಡರು.
ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ದಂಪತಿಯನ್ನು ಸನ್ಮಾನಿಸಲಾಯಿತು. ಉಭಯ ರಾಜ್ಯಪಾಲ ಜೊತೆಗೆ ಇಂದು ಮಹತ್ವದ ಸಭೆ ನಡೆಯುತ್ತಿದ್ದು ಗಡಿ ವಿವಾದ ಸೇರಿದಂತೆ ಮಹತ್ವದ ಚರ್ಚೆ ನಡೆಯಲಿದೆ. ಜೊತೆಗೆ ನೀರಾವರಿ ಹಾಗೂ ಗಡಿ ಹಂಚಿಕೆ ವಿಷಯದಲ್ಲಿ ಎರಡು ರಾಜ್ಯಗಳಿಂದ ಕೆಲವು ವಿರೋಧಗಳಿದ್ದು, ಸಮಸ್ಯೆಗಳ ಇತ್ಯರ್ಥಕ್ಕೆ ಈ ಭೇಟಿ ಸಹಕಾರಿಯಾಗಲಿದೆ ಎಂದು ವಿಶ್ಲೇಷಿಸಲಾಗುತ್ತದೆ.