Select Page

Advertisement

ನಾಯಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಅರೆಸ್ಟ್

ನಾಯಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಅರೆಸ್ಟ್

ಚಿಕ್ಕಮಗಳೂರು : ಬೀದಿ ನಾಯಿಗಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನ ವಿರುದ್ಧ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ಟೋಬರ್ 10 ರ ಬೆಳಿಗ್ಗೆ ನಾಲ್ಕು ಗಂಟೆಗೆ ಜಯಪುರ ಪಟ್ಟಣದ ಅಂಗಿಯೊಂದರ ಮುಂಬಾಗ ಕುಳಿತಿದ್ದ ಕಾಮುಕ ಬೀದಿ ನಾಯಿಗೆ‌ ಲೈಂಗಿಕ ಕಿರುಕುಳ ನೀಡಿದ್ದು ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.

ಸಧ್ಯ ಅಪರಾಧ ಎಸಗಿರುವ ಕಾಮುಕನ ಹೆಸರು ಶಿವರಾಜ ಎಂದು ತಿಳಿದುಬಂದಿದೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ‌.

ನಾಯಿಯೊಂದಿಗೆ ಯುವಕ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋ ಜಯಪುರ, ಕೊಪ್ಪ ಭಾಗದಲ್ಲಿ ಭಾರೀ ವೈರಲ್ ಆಗಿತ್ತು. ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆ ನೀಡಿದ ಮಾಹಿತಿ ಆಧಾರದಲ್ಲಿ ಜಯಪುರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಶಿವರಾಜನನ್ನು ಬಂಧಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!