Select Page

Advertisement

ಕೆಪಿಟಿಸಿಎಲ್ ( KPTCL ) ನಿಂದ 902 ಹುದ್ದೆಗಳ ನೇಮಕ ಆದೇಶ

ಕೆಪಿಟಿಸಿಎಲ್ ( KPTCL ) ನಿಂದ 902 ಹುದ್ದೆಗಳ ನೇಮಕ ಆದೇಶ
Advertisement

ಬೆಂಗಳೂರು: ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತವು (ಕೆಪಿಟಿಸಿಎಲ್) ಒಟ್ಟು 902 ಹುದ್ದೆಗಳ ಭರ್ತಿಗೆ ನೇಮಕ (KPTCL Recruitment) ಆದೇಶ ಹೊರಡಿಸಿದೆ.

ಚುನಾವಣಾ ನೀತಿ ಸಂಹಿತೆ ಜಾರಿ ಮುನ್ನ ಅಂದರೆ ಕಳೆದ ಮಾರ್ಚ್‌ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ಸಹಾಯಕ ಎಂಜಿನಿಯರ್‌(ವಿದ್ಯುತ್‌), 17 ಸಹಾಯಕ ಎಂಜಿನಿಯರ್(ಸಿವಿಲ್), 15-ಕಿರಿಯ ಎಂಜಿನಿಯರ್(ಸಿವಿಲ್) ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ನಡೆಸಿ ನೇಮಕಾತಿ ಆದೇಶ ನೀಡಲಾಗಿದೆ.

535 ಅಭ್ಯರ್ಥಿಗಳ ಪೈಕಿ 502 (ಕಿರಿಯ ಎಂಜಿನಿಯರ್) ಅಭ್ಯರ್ಥಿಗಳಿಗೆ ಬುಧವಾರ ಮತ್ತು ಗುರುವಾರ ಕೌನ್ಸಿಲಿಂಗ್‌ ನಡೆಸಲಾಗಿದೆ. ಈ ಪೈಕಿ 73 ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಪ್ರದೇಶ ವೃಂದಕ್ಕೆ ಸೇರಿದ್ದು, ಉಳಿದ 429 ಅಭ್ಯರ್ಥಿಗಳು ಇತರೆ ವೃಂದದವರಾಗಿದ್ದಾರೆ.

ಇನ್ನುಳಿದಂತೆ, 360 ಕಿರಿಯ ಸಹಾಯಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಶುಕ್ರವಾರ (ಮೇ 24, 2024) ಕಡೆಯ ದಿನವಾಗಿದೆ. ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲು ಕ್ರಮವಹಿಸಲಾಗುವುದು.

ಅಂತಿಮ ಆಯ್ಕೆ ಪಟ್ಟಿ ಪ್ರಕಟಣೆಗೊಂಡ ನಂತರ, ಎಲ್ಲಾ ಅಭ್ಯರ್ಥಿಗಳ ವಿದ್ಯಾರ್ಹತೆ ಹಾಗೂ ಮೀಸಲು ಕೋರಿರುವ ದಾಖಲೆಗಳ ಬಗ್ಗೆ ಸಂಬಂಧಿಸಿದ ಪ್ರಾಧಿಕಾರದಿಂದ ದೃಢೀಕರಣ ಪಡೆದು ತ್ವರಿತವಾಗಿ ಸ್ಥಳ ನಿಯುಕ್ತಿ ಹಾಗೂ ನೇಮಕ ಆದೇಶ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಟಿಸಿಎಲ್‌ ತಿಳಿಸಿದೆ.

ರಾಜ್ಯಾದ್ಯಂತ ವಿಶ್ವಾಸಾರ್ಹ ಮತ್ತು ಪರಿಣಾಮಕಾರಿ ವಿದ್ಯುತ್‌ ಪ್ರಸರಣ ಸೇವೆ ಒದಗಿಸುವುದು ನಮ್ಮ ಬದ್ಧತೆ. ಈ ನಿಟ್ಟಿನಲ್ಲಿ ಪಾರದರ್ಶಕವಾಗಿ ನೇಮಕ ಪ್ರಕ್ರಿಯೆ ನಡೆಸಿ, ಅಭ್ಯರ್ಥಿಗಳಿಗೆ ಕೆಲಸದ ಆದೇಶ ನೀಡಲಾಗಿದೆ.

902 ಹೊಸ ಉದ್ಯೋಗಿಗಳ ನೇಮಕದ ಮೂಲಕ ಕೆಪಿಟಿಸಿಎಲ್‌ ಇನ್ನಷ್ಟು ಬಲಗೊಂಡು, ಗುಣಮಟ್ಟದ ಸೇವೆಯನ್ನು ಮುಂದುವರಿಸಲಿದೆ. ಆಯ್ಕೆ ಪ್ರಕ್ರಿಯೆಯನ್ನುಅತ್ಯಂತ ಪಾರದರ್ಶಕ ಮತ್ತು ಸಮರ್ಥವಾಗಿ ನಡೆಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!