Select Page

Advertisement

BREAKING – ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ – ಮತ್ತೋರ್ವ ಆರೋಪಿ ಬಂಧನ

BREAKING – ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ – ಮತ್ತೋರ್ವ ಆರೋಪಿ ಬಂಧನ

ಬೆಳಗಾವಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸಲಾಗಿರುವ ಕೆಪಿಟಿಸಿಎಲ್ ನ ವಿವಿಧ ಹುದ್ದೆಗಳ ನೇಮಕಾತಿಗಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನಯುಳ್ಳ ಡಿವೈಸ್‌ಗಳ ಮೂಲಕ ಅಕ್ರಮ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಪೊಲೀಸರು ಮೈಕ್ರೋಚಿಪ್ ಉಪಯೋಗಿಸಿ ಪರೀಕ್ಷೆ ಬರೆದಿದ್ದ ಮತ್ತೋರ್ವ ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 51  ದಾಟಿದೆ.

ಬಂದಿತ ಆರೋಪಿ ಗೋಕಾಕ್ ತಾಲೂಕಿನ ಮಮದಾಪೂರ ರಸ್ತೆ ಉಪ್ಪಾರಟ್ಟಿಯ ಹನಮಂತ ಮಲ್ಲಪ್ಪ ಗುದಿಗೊಪ್ಪ (22).

ಬಂಧಿತ 2022 ಆಗಷ್ಟ 7 ರಂದು  ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ)ಯಿಂದ ನಡೆಸಲಾಗಿರುವ ಕೆಪಿಟಿಸಿಎಲ್?ನ ವಿವಿಧ ಹುದ್ದೆಗಳ ನೇಮಕಾತಿಗಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನಯುಳ್ಳ ಡಿವೈಸ್‌ಗನ್ನು ಉಪಯೋಗಿಸಿ ಪರೀಕ್ಷೆ ಬರೆದಿದ್ದಾರೆ. ಅಲ್ಲದೇ ಈ ಪರೀಕ್ಷಾ ಅಕ್ರಮ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಪಾಟೀಲ ಅವರು, ಅಕ್ರಮದಲ್ಲಿ ಪಾಲ್ಗೊಂಡ ಹಾಗೂ ಈ ಜಾಲಕ್ಕೆ ಸಂಪರ್ಕ ಹೊಂದಿದವರನ್ನು ಹೆಡೆಮುರಿ ಕಟ್ಟುವ ಕಾರ್ಯವನ್ನು ತಮ್ಮ ತಂಡದೊಂದಿಗೆ ಮುಂದುವರಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!