ಕುಡಿದ ನಶೆಯಲ್ಲಿ ಕೂಡಲಸಂಗಮ ಶ್ರೀಗಳಿಗೆ ಕಿರುಕುಳ : ಕಾಂಗ್ರೆಸ್ ನಾಯಕರ ವಿರುದ್ಧ ಗಂಭೀರ ಆರೋಪ
ಬೆಂಗಳೂರು : ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂದು ನಿರಂತರ ಹೋರಾಟ ಮಾಡಿದ್ದ ಕೂಡಲಸಂಗಮ ಬಸವ ಜಯಮೃತ್ಯುಂಜಯ ಶ್ರೀಗಳಿಗೆ ಕುಡಿದ ನಶೆಯಲ್ಲಿ ಕಿರುಕುಳ ನೀಡಲಾಗುತ್ತಿದೆ ಎಂದು ಸಚಿವ ಸಿ.ಸಿ ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ.
ಮೀಸಲಾತಿ ವಿಚಾರವಾಗಿ ಬಿಜೆಪಿ ತಗೆದುಕೊಂಡ ಐತಿಹಾಸಿಕ ನಿರ್ಧಾರವನ್ನು ಕೂಡಲಸಂಗಮ ಶ್ರೀಗಳು ಸ್ವಾಗತಿಸಿದ್ದಾರೆ. ಆದರೆ ಹೋರಾಟದಲ್ಲಿ ಪಾಲ್ಗೊಂಡ ನಲ್ಕಾರು ಕಾಂಗ್ರೆಸ್ ನಾಯಕರಲ್ಲಿ ಒಬ್ಬರು ಕುಡಿದ ನಶೆಯಲ್ಲಿ ಕರೆ ಮಾಡಿ ಶ್ರೀಗಳಿಗೆ ಹಿಂಸೆ ನೀಡುತ್ತಿದ್ದಾರೆ. ಇದರಿಂದ ಇಡೀ ಸಮುದಾಯಕ್ಕೆ ಒಂದು ಕೆಟ್ಟ ಹೆಸರು ತರುವ ನಿಟ್ಟಿನಲ್ಲಿ ಕೃತ್ಯ ನಡೆದಿದ್ದು ಖಂಡನೀಯ ಎಂದು ಸಚಿವ ಸಿ.ಸಿ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರು.
ಈ ಕುರಿತು ಸುದ್ದಿಘೋಷ್ಠಿ ನಡೆಸಿದ ಸಚಿವ ಸಿ.ಸಿ ಪಾಟೀಲ್ ಹಾಗೂ ಶಾಸಕ ಅರವಿಂದ್ ಬೆಲ್ಲದ್ ಕಾಂಗ್ರೆಸ್ ನಾಯಕರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಶ್ರೀಗಳಿಗೆ ಕುಡಿದ ನಶೆಯಲ್ಲಿ ಕರೆ ಮಾಡಿ ಮಾನಸಿಕ ಕಿರುಕಳ ನೀಡುತ್ತಿದ್ದಾರೆ ಎಂಬ ಆರೋಪ ಮಾಡಿದ್ದು, ಇದಕ್ಕೆ ಶ್ರೀಗಳು ಪ್ರತಿಕ್ರಿಯೆ ನೀಡಲು ನಿರಾಕರಣೆ ಮಾಡಿದ್ದಾರೆ.
ಹೋರಾಟದಲ್ಲಿ ಪಾಲ್ಗೊಂಡ ಕಾಂಗ್ರೆಸ್ ನಾಯಕರು ಯಾರು : ಪಂಚಮಸಾಲಿ ಹೋರಾಟದಲ್ಲಿ ಮುಂಚೂಣಿಯಾಗಿ ಕಾಣಿಸಿಕೊಂಡ ನಾಯಕರಲ್ಲಿ ಮೊದಲಿಗರು ವಿಜಯಾನಂದ ಕಾಶಪ್ಪನವರ ಹಾಗೂ ವಿನಯ್ ಕುಮಕರ್ಣಿ, ವೀನಾ ಕಾಶಪ್ಪನವರ.