
ಕಾಲೇಜು ಯುವತಿಯರನ್ನು ಪೀಡಿಸುತ್ತಿದ್ದ ವ್ಯಕ್ತಿಗೆ ನಡುರಸ್ತೆಯಲ್ಲಿ ಧರ್ಮದೇಟು

ಬೆಳಗಾವಿ : ಕಾಲೇಜಿನಿಂದ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಯರಿಗೆ ಪೀಡಿಸುತ್ತಿದ್ದ ಕುಡುಕನಿಗೆ ಸಾರ್ವಜನಿಕರೇ ಧರ್ಮದ ಏಟು ನೀಡಿದ ಘಟನೆ ಕ್ಲಬ್ ರಸ್ತೆಯ ನೀರಾವರಿ ಇಲಾಖೆಯ ಕಚೇರಿ ಎದುರು ಶುಕ್ರವಾರ ನಡೆದಿದೆ.
ಕ್ಲಬ್ ರಸ್ತೆಯಲ್ಲಿ ನೀರಾವರಿ ಇಲಾಖೆ, ಕಮರ್ಷಿಯಲ್ ಕಾಂಪ್ಲೆಕ್ಸ್, ಉತ್ತರ ವಲಯ ಐಜಿಪಿ ನಿವಾಸ, ತೋಟಗಾರಿಕೆ ಇಲಾಖೆ, ಜಿಲ್ಲಾಸ್ಪತ್ರೆ, ಜ್ಯೋತಿ ಕಾಲೇಜು ಇದೆ. ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಹಿರಿಯ ಅಧಿಕಾರಿಗಳು ಸೇರಿದಂತೆ ಸಾಮಾನ್ಯ ಜನರು ಸಂಚಾರ ನಡೆಸುತ್ತಿದ್ದಾರೆ. ಇಂಥದ್ದರಲ್ಲಿ ಕಾಲೇಜು ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಸತಾಯಿಸುತ್ತಿದ್ದ ಕುಡುಕನಿಗೆ ಸಾರ್ವಜನಿಕರು ಧರ್ಮದ ಏಟು ನೀಡಿದ್ದಾರೆ.

ಸ್ಥಳದಲ್ಲಿ ವಾಹನ ದಟ್ಟನೆ ಕಂಡ ಸಂಚಾರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ಪಟ್ಟರೂ ಕುಡಿದ ಮತ್ತಿನಲ್ಲಿದ್ದ ಕುಡುಕ ಅವರೊಂದಿಗೆ ವಾಗ್ವಾದ ಮಾಡಿದ್ದಾನೆ. ಸ್ಥಳೀಯರ ಸಹಕಾರದಿಂದ ಸಂಚಾರ ಪೊಲೀಸರು ಆತನನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ದರು.