ಬೆಳಗಾವಿ ನಗರ ಪೊಲೀಸರ ನಡೆಗೆ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ
ಬೆಳಗಾವಿ : ಕಾಲೇಜಿನಲ್ಲಿ ಕನ್ನಡ ಬಾವುಟ ಹಾರಿಸಿದ್ದ ಯುವಕನ ಮೇಲೆ ಸಹಪಾಠಿಗಳ ಹಲ್ಲೆ ನಂತರ ಪೊಲೀಸ್ ಠಾಣೆಯಲ್ಲಿ ಹಿರಿಯ ಅಧಿಕಾರಿಗಳಿಂದ ಹಲ್ಲೆ ನಡೆಸಿದ್ದ ಘಟನೆಯನ್ನು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಖಂಡಿಸಿದ್ದಾರೆ.
ಈ ಕುರಿತು ತಮ್ಮ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಬೆಳಗಾವಿಯಲ್ಲಿ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲಿನ ಹಲ್ಲೆ ಖಂಡಿಸುತ್ತೇನೆ. ಜೊತೆಗೆ ಪೊಲೀಸ್ ಠಾಣೆಗೆ ದೂರು ನೀಡಲು ಹೊದ ಸಂದರ್ಭದಲ್ಲಿ ವಿದ್ಯಾರ್ಥಿ ಮೇಲೆ ಪೊಲೀಸರ ಹಲ್ಲೆ ಖಂಡನೀಯ ಎಂದು ಆಕ್ರೋಶ ವ್ಯಕ್ತೊಡಿಸಿದ್ದಾರೆ.
ಘಟನೆ ವಿವರ : ಕನ್ನಡ ಧ್ವಜ ಹಿಡಿದು ಡ್ಯಾನ್ಸ್ ಮಾಡಿದ್ದ ಯುವಕರ ಮೇಲೆ ಹಲ್ಲೆ ಮಾಡಿದ್ದ ಘಟನೆ ನಂತರ, ಬಾವುಟ ಹಿಡಿದ ವಿದ್ಯಾರ್ಥಿಗಳಿಗೆ ರಕ್ಷಣೆ ನೀಡಬೇಕಿದ್ದ ಡಿಸಿಪಿ ಕಪಾಳಕ್ಕೆ ಹೊಡೆದಿದ್ದು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಎಂದು ಹಲ್ಲೆಗೊಳಗಾದ ಯುವಕ ಆರೋಪಿಸಿದ್ದಾನೆ.
ಖಾಸಗಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಬಾವುಟ ಹಿಡಿದು ಡ್ಯಾನ್ಸ್ ಮಾಡಿದ್ದ ಯುವಕರ ಮೇಲೆ ಸಹಪಾಠಿಗಳಿಂದ ಹಲ್ಲೆ ನಡೆದಿದೆ. ನಂತರ ಹಲ್ಲೆಗೆ ಒಳಗಾದ ಯುವಕರನ್ನು ಪೊಲೀಸ್ ಠಾಣೆಗೆ ಕರೆಸಿಕೊಂಡ ಪೊಲೀಸ್ ಅಧಿಕಾರಿಗಳು ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಗೆ ಒಳಗಾದ ಯುವಕರಿಗೆ ರಕ್ಷಣೆ ನಿಡಬೇಕಿದ್ದ ಪೊಲೀಸರೇ ಯುವಕರ ಮೇಲೆ ಧರ್ಪ ತೋರಿದರಾ ಎಂಬುದು ಸಧ್ಯದ ಪ್ರಶ್ನೆ.
ಹಲ್ಲೆ ಮಾಡಿದವರ ಮೇಲೆ ಕ್ರಮಕ್ಕೆ ಕನ್ನಡಪರ ಸಂಘಟನೆ ಸದಸ್ಯರು ಆಗ್ರಹಿಸಿದ್ದಾರೆ. ಜೊತೆಗೆ ಪೊಲೀಸ್ ಅಧಿಕಾರಿಗಳ ನಡೆಯನ್ನು ಖಂಡಿಸಿದ್ದಾರೆ.