
ಚಿಕ್ಕೋಡಿ : ಟಿಪ್ಪರ್ ಹಾಯ್ದು ಐವತ್ತಕ್ಕೂ ಅಧಿಕ ಕುರಿ ಸಾವು..!

ಚಿಕ್ಕೋಡಿ: ಟಿಪ್ಪರ ವಾಹನ ಹಾಯ್ದು ಐವತ್ತಕ್ಕೂ ಅಧಿಕ ಕುರಿಗಳು ಸಾವನ್ನಪ್ಪಿದ ಘಟನೆ ಹುಕ್ಕೇರಿ ತಾಲೂಕಿನ ಅಮ್ಮಣಗಿ ಗ್ರಾಮದಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಮ್ಮಣಗಿ ಗ್ರಾಮದ ಕುರಿಗಾಯಿ ಹಾಲಪ್ಪ ಸಿದ್ದಪ್ಪ ಹೆಗಡೆ ಎಂಬುವವರಿಗೆ ಸೇರಿದ ಐವತ್ತಕ್ಕೂ ಅಧಿಕ ಕುರಿಗಳು ಸಾವನ್ನಪ್ಪಿವೆ. ಗ್ರಾಮದ ಹೊರವಲಯದಲ್ಲಿ ರಸ್ತೆ ಮೇಲೆ ಕುರಿಗಳು ಬರುವ ಸಂದರ್ಭದಲ್ಲಿ ಟಿಪ್ಪರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಕುರಿಗಳ ಮೇಲೆ ಟಿಪ್ಪರ್ ವಾಹನ ಹಾಯ್ದಿದೆ.

ಈ ವೇಳೆ ಟಿಪ್ಪರ್ ಕುರಿಗಳ ಮೈಮೇಲೆ ಹರಿದ ಪರಿಣಾಮ 50ಕ್ಕೂ ಹೆಚ್ಚು ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ.ಇನ್ನೂ ಘಟನೆಯಲ್ಲಿ ಟಿಪ್ಪರ್ ಪಲ್ಟಿ ಆಗಿದ್ದು ಟಿಪ್ಪರ್ ವಾಹನವನ್ನ ಬಿಟ್ಟು ವಾಹನ ಚಾಲಕ ಪರಾರಿ ಆಗಿದ್ದಾನೆ. ಸ್ಥಳಕ್ಕೆ ಸಂಕೇಶ್ವದ ಪೋಲಿಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಸಂಕೇಶ್ವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆಗೆ ಪೊಲೀಸರು ಬಲೆಬೀಸಿದ್ದಾರೆ.ಇತ್ತ ಕುರಿಗಳನ್ನು ಕಳೆದುಕೊಂಡ ಮಾಲೀಕರ ಆಕ್ರಂದನ ಮುಗಿಲುಮುಟ್ಟಿದೆ.
