
ಭೀಕರ ಅಗ್ನಿ ದುರಂತ ; 40 ಜನ ಸಜೀವ ದಹನ

ಬೆಂಗಳೂರು : ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು 40 ಜನ ಸ್ಥಳದಲ್ಲೇ ಸಜೀವ ದಹನವಾಗಿದ್ದು 35 ಕ್ಕೂ ಅಧಿಕ ಜನರನ್ನು ಆಸ್ಪತ್ರೆಗೆ ದಾಖಲಿಸಿರುವ ಘಟನೆ ಕುವೈತ್ ನಲ್ಲಿ ಸಂಭವಿಸಿದೆ.
ಕುವೈತ್ ನಲ್ಲಿ ಈ ಘಟನೆ ಸಂಭವಿಸಿದ್ದು ಅಗ್ನಿ ಅವಘಡದಲ್ಲಿ ಮೃತಪಟ್ಟ 40 ಕ್ಕೂ ಅಧಿಕ ಜನ ಭಾರತೀಯ ಮೂಲದವರು ಎಂದು ತಿಳಿದುಬಂದಿದೆ. ಜೊತೆಗೆ ಇವರೆಲ್ಲರೂ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ.
ಈ ಘಟನೆಯಲ್ಲಿ 30 ಕ್ಕೂ ಅಧಿಕ ಜಮ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಬಹು ಮಹಡಿಯ ಕಟ್ಟಡ ಇದಾಗಿದ್ದು ಅಗ್ನಿ ಅವಘಡದಲ್ಲಿ ಸಂಪೂರ್ಣ ಹೊತ್ತಿ ಉರಿದಿದೆ.