
ಆರೋಗ್ಯದಲ್ಲಿ ಏರುಪೇರು ; ಬಿಜೆಪಿ ಭೀಷ್ಮ ಅಡ್ವಾಣಿ ಆಸ್ಪತ್ರೆಗೆ ದಾಖಲು

ಬೆಂಗಳೂರು : ಆರೋಗ್ಯದಲ್ಲಿ ಕೊಂಚ ಏರುಪೇರಾದ ಹಿನ್ನಲೆಯಲ್ಲಿ ಮಾಜಿ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಎಲ್.ಕೆ ಅಡ್ವಾಣಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳೆದ 15 ದಿನದ ಅವಧಿಯಲ್ಲಿ ಇದು ಎರಡನೇ ಅವಧಿಗೆ ಲಾಲಕೃಷ್ಣ ಅಡ್ವಾಣಿ ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಇವರು ಸಧ್ಯ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಪೋಲೋ ಆಸ್ಪತ್ರೆಯಲ್ಲಿ ಡಾ. ವಿನಿತ್ ಸೂರಿ ಅವರು ಚಿಕಿತ್ಸೆ ನೀಡುತ್ತಿದ್ದು ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. 96 ವರ್ಷದ ಎಲ್.ಕೆ ಅಡ್ವಾಣಿ ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂಬುದು ಜನರ ಹಾರೈಕೆಯಾಗಿದೆ.