ನಾಳೆ ಬೆಂಗಳೂರಿಗೆ ತೆರಳಿ ಸವದಿ ರಾಜೀನಾಮೆ : ಕಾಂಗ್ರೆಸ್ ಸೇರ್ಪಡೆ ಕುರಿತು ಮುಖಂಡರ ಅಸಮಾಧಾನ
ಬೆಳಗಾವಿ : ಅಥಣಿ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಮುನಿಸಿಕೊಂಡಿರುವ ಮಾಜಿ ಡಿಸಿಎಂ ಲಕ್ಷಣ ಸವದಿ ನಾಳೆ ಬೆಂಗಳೂರಿಗೆ ತೆರಳಿ ರಾಜೀನಾಮೆ ಸಲ್ಲಿಸುದಾಗಿ ಹೇಳಿಕೆ ನೀಡಿದ್ದಾರೆ.
ಅಥಣಿ ಪಟ್ಟಣದಲ್ಲಿ ಮಾದ್ಯಮಗಳಿಗೆ ಹೇಳಿಕೆ ನೀಡಿರುವ ಇವರು. ಪಕ್ಷದ ಟಿಕೆಟ್ ಕೈ ತಪ್ಪಿದ್ದಕ್ಕೆ ನೋವಾಗಿದೆ. ನಾಳೆಯೇ ಸದಸ್ಯತ್ವಕ್ಕೆ ಹಾಗೂ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುದಾಗಿ ಹೇಳಿದ್ದು, ಈವರೆಗೂ ಪಕ್ಷದ ಹೈಕಮಾಂಡ್ ನನ್ನ ಸಂಪರ್ಕ ಮಾಡಿಲ್ಲ ಎಂದು ತಿಳಿಸಿದ್ದಾರೆ.
ಸವದಿ ಕಾಂಗ್ರೆಸ್ ಸೇರ್ಪಡೆಗೆ ಮುಖಂಡರ ವಿರೋಧ : ಬಿಜೆಪಿ ತೊರೆದು ಲಕ್ಷಣ ಸವದಿ ಕಾಂಗ್ರೆಸ್ ಸೇರ್ಪಡೆ ವಿಚಾರದಲ್ಲಿ ಪಕ್ಷದ ಒಳಗೆ ವಿರೋಧ ವ್ಯಕ್ತವಾಗಿದೆ ಎಂದು ತಿಳಿದುಬಂದಿದೆ. ಅನೇಕ ವರ್ಷಗಳಿಂದ ಹೋರಾಟ ಮಾಡಿ ನಾವು ಪಕ್ಷ ಸಂಘಟನೆ ಮಾಡಿದ್ದು ನಮ್ಮ ರಾಜಕೀಯ ವಿರೋಧಿಗೆ ಬೆಂಬಲ ನೀಡಲು ಸಾಧ್ಯವಿಲ್ಲ ಎಂದು ಮುಖಂಡರು ಆಕ್ರೋಶ ಹೊರಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.
ಸವದಿ ಕಾಂಗ್ರೆಸ್ ಸೇರ್ಪಡೆಗೆ ಜಿಲ್ಲೆಯ ಹಿರಿಯ ಮುಖಂಡರಲ್ಲಿ ಇಬ್ಬರು ಆಕ್ಷೇಪ ಹೊರ ಹಾಕಿದ್ದಾಗಿ ಕೇಳಿಬಂದಿದೆ. ಅಥಣಿಯಲ್ಲಿ ಕಾಂಗ್ರೆಸ್ ಪ್ರಭಲವಾಗಿದ್ದು ನಮ್ಮ ಪಕ್ಷದ ಕಾರ್ಯಕರ್ತನಿಗೆ ಟಿಕೆಟ್ ಕೊಟ್ಟು ಗೆಲ್ಲಿಸಿಕೊಂಡು ತರುವ ಮಾತನಾಡಿದ್ದು ಇದು ಸವದಿಗೆ ಹಿನ್ನೆಡೆ ಆಗುವ ಸಾಧ್ಯತೆ ದಟ್ಟವಾಗಿದೆ.