ರಾಜಕೀಯ ಬಿಡುತ್ತೇನೆ ಹೊರತು ಅಥಣಿ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡಲ್ಲ : ಸಾಹುಕಾರ್ ಸ್ಪಷ್ಟನೆ
ಬೆಳಗಾವಿ : ಮಹೇಶ್ ಕುಮಠಳ್ಳಿ ಶಾಸಕರಾದರೆ ಅಥಣಿಯಲ್ಲಿ ರಮೇಶ್ ಜಾರಕಿಹೊಳಿ ಹಸ್ತಕ್ಷೇಪ ವಿಚಾರವಾಗಿ. ನೀವು ಕೇಳಿದರೆ ನನ್ನ ಅಧಿಕಾರಕ್ಕೆ ರಾಜೀನಾಮೆ ಕೊಡುತ್ತೇನೆ ಹೊರತಾಗಿ ಯಾವುದೇ ಕಾರಣಕ್ಕೂ ಅಥಣಿ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡಲ್ಲ ಎಂದು ರಮೇಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.
ಆಥಣಿ ಪಟ್ಟಣದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಇವರು. ನಾನು ಅಥಣಿಯಲ್ಲಿ ಹಸ್ತಕ್ಷೇಪ ಮಾಡುತ್ತೇನೆ ಎಂದು ಸುಳ್ಳು ಹಬ್ಬಿಸುವ ಕೆಲಸ ವಿರೋಧಿಗಳು ಮಾಡುತ್ತಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ನಾನು ಅಥಣಿ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡಲ್ಲ. ಅಥಣಿ ಜನ ಕೇಳಿದರೆ ನಾನು ರಾಜೀನಾಮೆ ಕೊಟ್ಟು ಮನೆಯಲ್ಲಿ ಕುಳಿತುಕೊಳ್ಳುವುದಕ್ಕೂ ಸಿದ್ಧ ಎಂದು ಹೇಳಿದರು.
ಒಟ್ಟಿನಲ್ಲಿ ಅಥಣಿಯಲ್ಲಿ ಸಧ್ಯ ಲಕ್ಷಣ ಸವದಿ ಹಾಗೂ ಮಹೇಶ್ ಕುಮಠಳ್ಳಿ ನಡುವೆ ನೇರ ಹಣಾಹಣಿ ನಡೆದಿದ್ದು ರಮೇಶ್ ಜಾರಕಿಹೊಳಿ ನಾನು ಹಸ್ತಕ್ಷೇಪ ಮಾಡುವುದಿಲ್ಲ ಎಂಬ ವಿಚಾರ ಸಧ್ಯ ಕ್ಷೇತ್ರದಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ. ಹಾಗೂ ಆಪ್ತ ಮಹೇಶ್ ಕುಮಠಳ್ಳಿ ಗೆಲ್ಲಿಸುವ ಮೂಲಕ ಅಥಣಿ ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸುವುದಾಗಿ ಸಾಹುಕಾರ್ ಹೇಳಿದ್ದಾರೆ.


