ಬಂದ್ ಮಾಡಿದರೆ ನೀರು ನಿಲ್ಲಲ್ಲ ; ಕರ್ನಾಟಕ ಬಂದ್ ಗೆ ಸವದಿ ಖಂಡನೆ
ಅಥಣಿ : ಕಾವೇರಿ ವಿಚಾರವಾಗಿ ಕರ್ನಾಟಕ ಬಂದ್ ಮಾಡಿದರೆ ನೀರು ನಿಲ್ಲುವುದಿಲ್ಲ. ಬಂದ್ ಮಾಡುವುದರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತದೆ ಹೊರತು ಯಾವುದೇ ಲಾಭವಿಲ್ಲ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಖಂಡನೆ ವ್ಯಕ್ತಪಡಿಸಿದರು.
ಅಥಣಿ ತಾಲೂಕಿನ ನಂದಗಾವ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಇವರು.
ಕಾವೇರಿ ವಿಚಾರವಾಗಿ ಕರ್ನಾಟಕ ಬಂದ್ ಮಾಡುವುದು ಒಳ್ಳೆಯ ಬೆಳವಣಿಗೆಯಲ್ಲ. ಬಂದ್ ನಿಂದ ಸಾರ್ವಜನಿಕರಿಗೆ ತೀವ್ರವಾಗಿ ತೊಂದರೆಯಾಗುತ್ತದೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡಲು ಪ್ರತಿಯೊಬ್ಬರಿಗೂ ಹಕ್ಕಿದೆ. ಸಂವಿಧಾನದ ಬದ್ಧವಾಗಿ ಪ್ರತಿಭಟನೆ ಮಾಡುವುದನ್ನು ಬಿಟ್ಟು ಬಂದ್ ಮಾಡಿದರೆ ಜನಸಾಮಾನ್ಯನಿಗೆ ತೊಂದರೆಯಾಗುತ್ತದೆ ಎಂದರು.
ಲೋಕಸಭಾ ಚುನಾವಣೆ ವೇಳೆ ಬಹಳಷ್ಟು ಜನ ಬಿಜೆಪಿ, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲು ಆಸಕ್ತಿ ತೋರಿಸುತ್ತಿದ್ದಾರೆ. ಕಾಲ ಕೂಡಿ ಬಂದಾಗ ಯಾವೆಲ್ಲ ನಾಯಕರು ಬರುತ್ತಾರೆ ಎಂಬುದನ್ನು ಪ್ರಕಟಿಸುವೆ.
ರಮೇಶ್ ಕತ್ತಿ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಯಾವುದೇ ಚರ್ಚೆ ನಡೆದಿಲ್ಲ. ಮುಂಬರುವ ದಿನಗಳಲ್ಲಿ ಅನೇಕರು ಕಾಂಗ್ರೆಸ್ ಸೇರುವುದು ನಿಶ್ಚಿತ ಎಂದು ಅಭಿಪ್ರಾಯಪಟ್ಟರು.