ಸವದಿ ಮನೆಗೆ ಬಂದ ಸುರ್ಜೆವಾಲಾ…!
ಬೆಳಗಾವಿ : ಮಾಜಿ ಡಿಸಿಎಂ ಲಕ್ಷಣ ಸವದಿ ಅವರ ಬೆಳಗಾವಿ ನಿವಾಸಕ್ಕೆ ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಭೇಟಿ ನೀಡಿ ಮಹತ್ವದ ಮಾತುಕತೆ ನಡೆಸಿದ್ದಾರೆ.
ಗುರುವಾರ ಬೆಳಗಾವಿಯ ಸದಾಶಿವನಗರದಲ್ಲಿರುವ ಸವದಿ ಮನೆಗೆ ಭೇಟಿ ನೀಡಿದ ಸುರ್ಜೆವಾಲಾ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಚುನಾವಣೆ ಕುರಿತು ಮಹತ್ವದ ಮಾತುಕತೆ ನಡೆಸಿರುವ ಉಭಯ ನಾಯಕರು ಚುನಾವಣೆ ರಣತಂತ್ರದ ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದೆ.