Select Page

Advertisement

ಸಿಎಂ ಪರ ಸವದಿ ಬ್ಯಾಟಿಂಗ್ ; ಜಾರಕಿಹೊಳಿಗೆ ಟಾಂಗ್ ಕೊಟ್ಟರಾ ಸಾಹುಕಾರ್..?

ಸಿಎಂ ಪರ ಸವದಿ ಬ್ಯಾಟಿಂಗ್ ; ಜಾರಕಿಹೊಳಿಗೆ ಟಾಂಗ್ ಕೊಟ್ಟರಾ ಸಾಹುಕಾರ್..?

ಅಥಣಿ : ಸಿಎಂ ಬದಲಾವಣೆ ಎಂಬುದು ಕೇವಲ ಹಗಲುಗನಸು. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು.‌

ಸಧ್ಯ ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿವೆ. ಈ ಮಧ್ಯೆ ಸಚಿವ ಸತೀಶ್ ಜಾರಕಿಹೊಳಿ ಪ್ರಮುಖ ನಾಯಕರ ಭೇಟಿಯಾಗುತ್ತಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸಿಎಂ ಪರ ಬ್ಯಾಟ್ ಬೀಸಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ.

ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಪ್ರತಿಕ್ರಿಯೆ ನೀಡಿದ ಲಕ್ಷ್ಮಣ ಸವದಿ. ಯಾವುದೇ ಭ್ರಷ್ಟಾಚಾರ ಮಾಡದ ಸಿಎಂ ಸಿದ್ದರಾಮಯ್ಯ ಅವರಿಗೆ ಕಪ್ಪು ಮಸಿ ಬಳಿಯುವ ಕೆಲಸ ಬಿಜೆಪಿಯವರು ಮಾಡುತ್ತಿದ್ದಾರೆ. ಅವರಿಗೆ ಬೇರೆ ಕೆಲಸವಿಲ್ಲ. ಸಿಎಂ ಬದಲಾವಣೆ ಕೇವಲ ಊಹಾಪೋಹ ಎಂದರು.

Advertisement

Leave a reply

Your email address will not be published. Required fields are marked *

error: Content is protected !!