ಬಿಜೆಪಿ ಟಿಕೆಟ್ ಕೈ ತಪ್ಪುವ ಭೀತಿ ; ಸವದಿ ನಡೆ ನಿಗೂಢ
ಬೆಳಗಾವಿ : ಈಗಾಗಲೇ ಬಿಜೆಪಿ ಪಟ್ಟಿ ಬಿಡುಗಡೆ ಮಾಡುವತ್ತ ಸಭೆ ನಡೆಯುತ್ತಿರುವ ಬೆನ್ನಲ್ಲೇ ಅಥಣಿ ಟಿಕೆಟ್ ಲಕ್ಷಣ ಸವದಿಗೆ ತಪ್ಪುವ ಭೀತಿ ಎದುರಾಗಿದೆ. ಈ ಬೆನ್ನಲ್ಲೇ ಲಕ್ಷಣ ಸವದಿ ಯಾವ ನಿರ್ಧಾರ ತಗೆದುಕೊಳ್ಳುತ್ತಾರೆ ಎಂಬುದು ನಿಗೂಢವಾಗಿದೆ.
ಹೇಗಾದರು ಮಾಡಿ ಟಿಕೆಟ್ ಪಡೆಯುವ ಹುಮ್ಮಸ್ಸಿನಲ್ಲಿದ್ದ ಲಕ್ಷಣ ಸವದಿ ಅವರಿಗೆ ಕೊನೆ ಕ್ಷಣದಲ್ಲಿ ಬಿಜೆಪಿ ಹೈಕಮಾಂಡ್ ಟಿಕೆಟ್ ನಿರಾಕರಣೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಂದರ್ಭದಲ್ಲಿ ಲಕ್ಷಣ ಸವದಿ ಅವರಿಗೆ ಹಿನ್ನಡೆಯಾಗಿದ್ದು ಕಾಂಗ್ರೆಸ್ ಸೇರ್ಪಡೆ ಆಗುತ್ತಾರಾ ಎಂಬ ಮಾತುಗಳು ಕೇಳಿಬರುತ್ತಿವೆ.
ಈಗಾಗಲೇ ಮಹೇಶ್ ಕುಮಠಳ್ಳಿಗೆ ಟಿಕೆಟ್ ನೀಡದಿದ್ದರೆ ನಾನು ಸ್ಪರ್ಧೆ ಮಾಡಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಜೊತೆಗೆ ಆರ್ ಎಸ್ ಎಸ್ ಪ್ರಮುಖ ನಾಯಕರು ಸಹ ಮಹೇಶ್ ಕುಮಠಳ್ಳಿ ಪರ ಬ್ಯಾಟ್ ಬೀಸಿದ್ದು ಇವರಿಗೆ ಟಿಕೆಟ್ ದಂದು ಹೇಳಲಾಗುತ್ತಿದೆ.