ಅಥಣಿ ಕೃಷ್ಣಾ ಕಾರ್ಖಾನೆ ಫಲಿತಾಂಶ : ಜಾರಕಿಹೊಳಿ ಬಣಕ್ಕೆ ತೀವ್ರ ಮುಖಭಂಗ

ಬೆಳಗಾವಿ : ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಣ ಭರ್ಜರಿ ಗೆಲುವು ಸಾಧಿಸಿದೆ.
ಕುಮಠಳ್ಳಿ ಹಾಗೂ ಲಕ್ಷ್ಮಣ ಸವದಿ ಬೆಂಬಲಿತ ಅಭ್ಯರ್ಥಿಗಳ ಮಧ್ಯೆ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಕೊನೆಗೂ ಫಲಿತಾಂಶ ಪ್ರಕಟಗೊಂಡಿದ್ದು ಸವದಿ ಬಣ ಭರ್ಜರಿ ಗೆಲುವು ಸಾಧಿಸಿದೆ.
ಲಕ್ಷ್ಮಣ ಸವದಿ ಬೆಂಬಲಿತ 12 ಜನ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಈಗಾಗಲೇ ಒಂದು ಸ್ಥಾನಕ್ಕೆ ಅವಿರೋಧ ಆಯ್ಜೆಯಾದ ಹಿನ್ನಲೆಯಲ್ಲಿ ಸವದಿ ಬೆಂಬಲಿತ 13 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಚುನಾವಣಾ ಪೂರ್ವದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದ ರಮೇಶ್ ಜಾರಕಿಹೊಳಿ ಬಣಕ್ಕೆ ಮುಖಭಂಗವಾಗಿದೆ.


