ಬೆಳಗಾವಿ : ಮುಂಬರುವ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಅಥಣಿ ಕ್ಷೇತ್ರದಲ್ಲಿ ಲಕ್ಷ್ಮಣ ಸವದಿಯನ್ನು ಸೋಲಿಸುವೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಭಿಪ್ರಾಯಪಟ್ಟರು.
ಬೆಳಗಾವಿ ನಂತರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಇವರು. ಜಿಲ್ಲಾ ರಾಜಕಾರಣದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜೊತೆ ಹೊಂದಾಣಿಕೆ ಪ್ರಶ್ನೆ ಇಲ್ಲ. ಅಥಣಿಯಲ್ಲಿ ಲಕ್ಷ್ಮಣ ಸವದಿಯನ್ನು ಸೋಲಿಸುವೆ ಎಂದರು.
ಕಳೆದ ಡಿಸಿಸಿ ಬ್ಯಾಂಕ್ ಚುನಾವಣೆ ಸಂದರ್ಭದಲ್ಲಿ ಉಸ್ತುವಾರಿ ಸಚಿವರು ಹೆಬ್ಬಾಳಕರ್ ಕುಟುಂಬದ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದು ಅವರ ವೈಯಕ್ತಿಕ ವಿಚಾರ. ನಾನು ಯಾವುದೇ ಕಾರಣಕ್ಕೂ ಹೊಂದಾಣಿಕೆಗೆ ಒಪ್ಪಿಗೆ ನೀಡುವುದಿಲ್ಲ ಎಂದರು.
ಅಥಣಿಯಲ್ಲಿ ಸವದಿಯನ್ನು ಮಾಜಿ ಮಾಡುವೆ ; ರಮೇಶ್ ಜಾರಕಿಹೊಳಿ



