ಅಥಣಿಯಲ್ಲಿ ಮಹೇಶ್ ಕುಮಠಳ್ಳಿಗೆ ಟಿಕೆಟ್ ಪೈನಲ್ : ಸಿಎಂ ಹೇಳಿಕೆ
ಬೆಳಗಾವಿ : ತೀವ್ರ ಕುತೂಹಲ ಮೂಡಿಸಿದ್ದ ಅಥಣಿ ಟಿಕೆಟ್ ಯಾರಿಗೆ ಎಂಬ ಗೊಂದಲಕ್ಕೆ ತೆರೆ ಎಳೆಯಲಾಗಿದ್ದು ಮಹೇಶ್ ಕುಮಠಳ್ಳಿಗೆ ಈ ಬಾರಿ ಬಿಜೆಪಿ ಟಿಕೆಟ್ ಫೈನಲ್ ಎಂದು ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ದೆಹಲಿಯಲ್ಲಿ ಈ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ. ಅಥಣಿ ಶಾಸಕ ಮಹೇಶ್ ಕುಮಠಳ್ಳಿ ಸರರ್ಕಾರ ರಚನೆಯ ಹಿನ್ನಲೆ ರಾಜೀನಾಮೆ ನೀಡಿ ಬಂದಿದ್ದರು. ಈ ಕಾರಣದಿಂದ ಮಹೇಶ್ ಕುಮಠಳ್ಳಿಗೆ ಟಿಕೆಟ್ ನೀಡಲಾಗಿದ್ದು, ಮಾಜಿ ಡಿಸಿಎಂ ಸವದಿ ಜೊತೆ ವರಿಷ್ಠರು ಮಾತನಾಡಿದ್ದಾರೆ ಎಂದು ಹೇಳಿದರು.
ಈಗಾಗಲೇ ಟಿಕೆಟ್ ಕೈ ತಪ್ಪಿದರೆ ಲಕ್ಷಣ ಸವದಿ ಕಾಂಗ್ರೆಸ್ ಸೇರ್ಪಡೆ ಆಗುತ್ತಾರಾ ಎಂಬ ಮಾತು ಕೇಳಿಬಂದಿದ್ದು ಈವರೆಗೂ ಲಕ್ಷಣ ಸವದಿ ಯಾವುದೇ ಹೇಳಿಕೆ ನೀಡಿಲ್ಲ. ಈಗಾಗಲೇ ಲಕ್ಷಣ ಸವದಿ ಅವರಿಗೆ ಟಿಕೆಟ್ ಮಿಸ್ ಆದರೆ ಕಾಂಗ್ರೆಸ್ ಸೇರ್ಪಡೆ ಮಾಡಿಕೊಳ್ಳಬೇಕು ಎಂಬ ಆಲೋಚನೆ ನಡೆದಿದೆ ಎಂದು ಹೇಳಲಾಗುತ್ತಿದೆ.