Select Page

Advertisement

ಜನರ ಪ್ರೀತಿ ಕಂಡು ಕಣ್ಣೀರು ಹಾಕಿದ ಲಕ್ಷ್ಮಣ ಸವದಿ ; ಬೀದಿಗಿಳಿದ ಬೆಂಬಲಿಗರು..!

ಜನರ ಪ್ರೀತಿ ಕಂಡು ಕಣ್ಣೀರು ಹಾಕಿದ ಲಕ್ಷ್ಮಣ ಸವದಿ ; ಬೀದಿಗಿಳಿದ ಬೆಂಬಲಿಗರು..!


ಅಥಣಿ : ನನ್ನ ಸಂಕಷ್ಟದ ಸಂದರ್ಭದಲ್ಲಿ ನೀವು ನನ್ನ ಕೈ ಬಿಟ್ಟಿಲ್ಲ. ನಾನು ಸಾಯುವವರೆಗೂ ನಿಮ್ಮನ್ನು ಮರೆಯುವುದಿಲ್ಲ ಎಂದು ಜನರ ಪ್ರೀತಿಗೆ ಶಾಸಕ ಲಕ್ಷ್ಮಣ ಸವದಿ ಕಣ್ಣೀರು ಹಾಕಿರುವ ಘಟನೆ ನಡೆದಿದೆ‌.

ಬಿಡಿಸಿಸಿ ನೌಕರರ ಸಂಘದ ಅಧ್ಯಕ್ಷನ ಮೇಲೆ ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಶಾಸಕ ಲಕ್ಷ್ಮಣ ಸವದಿ ಸೇರಿದಂತೆ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗುದ್ದನ್ನು ಖಂಡಿಸಿ ಸೋಮವಾರ ಅಥಣಿ ಪಟ್ಟಣದಲ್ಲಿ ಬೆಂಬಲಿಗರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಫೋನ್ ಕರೆ ಮೂಲಕ ಮಾತನಾಡಿದರು. ನನ್ನ ಸಂಕಷ್ಟದ ಸಂದರ್ಭದಲ್ಲಿ ಬೆಂಬಲಿಗರು ನನ್ನ ಕೈ ಬಿಟ್ಟಿಲ್ಲ. ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ಮಾಡಲಾಗಿದೆ. ನೀವೆ ಇದಕ್ಕೆ ತಕ್ಕ ಉತ್ತರ ನೀಡಿದ್ದೀರಿ ಎಂದು ಭಾವನಾತ್ಮಕವಾಗಿ ಮಾತನಾಡಿದರು.

ಸಾವಿರಾರು ಸಂಖ್ಯೆಯಲ್ಲಿ ಶಾಸಕ ಲಕ್ಷ್ಮಣ ಸವದಿ ಅಭಿಮಾನಿಗಳು ಅಥಣಿ ಪಟ್ಟಣಲ್ಲಿ ಸೇರಿ ಪ್ರತಿಭಟನೆ ನಡೆಸಿ ಡಿವೈಎಸ್ಪಿ ಅವರಿಗೆ ಮನವಿ ಸಲ್ಲಿಸಿದರು.

Advertisement

Leave a reply

Your email address will not be published. Required fields are marked *

error: Content is protected !!