Select Page

ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುವೆ – ಲಕ್ಷ್ಮಣ ಸವದಿ

ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುವೆ – ಲಕ್ಷ್ಮಣ ಸವದಿ

ಅಥಣಿ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಮುನಿಸಿಕೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪಕ್ಷ ತೊರೆಯುವ ಮಾತನಾಡಿದ್ದಾರೆ.

ಅಥಣಿಯಲ್ಲಿ ನಡೆದ ಸುದ್ದಿಘೋಷ್ಠಿಯಲ್ಲಿ ಮಾತನಾಡಿದ ಇವರು. ನಾನು ಅಥಣಿ ಕ್ಷೇತ್ರದ ಮತದಾರರನ್ನು ನಂಬಿದವನು. ಪಕ್ಷ ನನಗೆ ಟಿಕೆಟ್ ನೀಡುವ ಭರವಸೆ ನೀಡಿತ್ತು. ಆದರೆ ನನಗೆ ಟಿಕೆಟ್ ನೀಡದೆ ಹೈಕಮಾಂಡ್ ದ್ರೋಹ ಮಾಡಿದೆ ಎಂದು ಹೇಳಿಕೆ ನೀಡಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಕಿಡಿ ಕಾರಿರುವ ಲಕ್ಷ್ಮಣ ಸವದಿ, ಮುಂದಿನ ದಿನದಲ್ಲಿ ಎಲ್ಲವನ್ನೂ ಬಿಚ್ಚಿಡುತ್ತೇನೆ ಎಂಬ ಮಾತು ಹೇಳಿದ್ದಾರೆ. ಒಟ್ಟಿನಲ್ಲಿ ಬೆಳಗಾವಿ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪಕ್ಷ ತೊರೆಯುತ್ತಾರಾ ಎಂದು ಕಾದು ನೋಡಬೇಕು.

Advertisement

Leave a reply

Your email address will not be published. Required fields are marked *

error: Content is protected !!