ಡಿಸಿಸಿ ಅಖಾಡಕ್ಕೆ ಜೋಡೆತ್ತು ; ಸವದಿ, ಕಾಗೆ ನಾಮಪತ್ರ ಸಲ್ಲಿಸಲು ಸಜ್ಜು…!
ಬೆಳಗಾವಿ ; ಶಾಸಕ ಲಕ್ಷ್ಮಣ ಸವದಿ ಹಾಗೂ ರಾಜು ಕಾಗೆ ಡಿಸಿಸಿ ಚುನಾವಣಾ ಅಖಾಡಕ್ಕೆ ಇಳಿಯಲಿದ್ದು ಇದೇ ಅಕ್ಟೋಬರ್ 10 ರ ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ.
ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನದ ಅಥಣಿ ಕ್ಷೇತ್ರದಿಂದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಕಾಗವಾಡ ಕ್ಷೇತ್ರದಿಂದ ಶಾಸಕ ರಾಜು ಕಾಗೆ ನಾಮಪತ್ರ ಸಲ್ಲಿಸಲು ಸಜ್ಜಾಗಿದ್ದಾರೆ.
ಸುದೀರ್ಘ ಮೂರು ದಶಕಗಳಿಂದ ಬೆಳಗಾವಿ ಡಿಸಿಸಿ ಬ್ಯಾಂಕಿನ ಸೇವೆ ಸಲ್ಲಿಸಿರುವ ಲಕ್ಷ್ಮಣ ಸವದಿ ಜೊತೆ ಆಪ್ತ ಸ್ನೇಹಿತ ರಾಜು ಕಾಗೆ ಈ ಬಾರಿ ಸ್ಪರ್ಧಿಸಲಿದ್ದಾರೆ.
ಇನ್ನೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಪ್ತರಾದ ಮಾಜಿ ಶಾಸಕ ಮಹೇಶ್ ಕುಮಠಳ್ಳಿ ಅಥಣಿಯಿಂದ ಸ್ಪರ್ಧಿಸಿದ್ದರೆ ಕಾಗವಾಡದಿಂದ ಮಾಜಿ ಸಚಿವ ಶ್ರೀಮಂತ ಪಾಟೀಲ ಪುತ್ರ ಕಣಕ್ಕಿಳಿಯಲಿದ್ದಾರೆ.


