
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುಣಮುಖ ; ಜೈ ಶಿವಾಜಿ ಘೋಷಣೆ ಝೇಂಕಾರ…!

ಬೆಳಗಾವಿ : ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುಣಮುಖರಾಗಿದ್ದು, ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದ ತುರಮುರಿ ಗ್ರಾಮದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ನೂತನ ಮೂರ್ತಿಯ ಪ್ರತಿಷ್ಟಾಪನೆಯ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿದ್ದರು. ಅಪಘಾತದ ನಂತರ ಸಚಿವರು ಮೊದಲ ಕಾರ್ಯಕ್ರಮ ಇದಾಗಿದೆ.