
ಸಚಿವೆ ಹೆಬ್ಬಾಳಕರ್ ಗೆ ಅಶ್ಲೀಲ ಪದ ಬಳಕೆ ; ಸಿ.ಟಿ ರವಿ ಬಂಧನ

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಷತ್ ಸದಸ್ಯ ಸಿ.ಟಿ ರವಿ ಅವರನ್ನು ಹಿರೇಬಾಗೇವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪರಿಷತ್ ಕಲಾಪ ಮುಕ್ತಾಯದ ನಂತರ ಸುವರ್ಣಸೌಧಕ್ಕೆ ಆಗಮಿಸಿದ ಹಿರೇಬಾಗೇವಾಡಿ ಪೊಲೀಸರು ಸಿ.ಟಿ ರವಿ ಅವರನ್ನು ವಶಕ್ಕೆ ಪಡೆದುಕೊಂಡು. ಈ ಸಂದರ್ಭದಲ್ಲಿ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅರವಿಂದ ಬೆಲ್ಲದ್ ಪೊಲೀಸ್ ವಾಹನ ತಡೆದು ಪ್ರತಿಭಟನೆಗೆ ಮುಂದಾದರು.
ವಿಧಾನಸಭೆಯಲ್ಲಿ ಸದಸ್ಯೆ ಲಕ್ಷ್ಮೀ ಹೆಬ್ಬಾಳಕರ್ ಹಕ್ಕು ಚ್ಯುತಿ ನಿರ್ಣಯದ ಬಳಿಕ ಬಿಜೆಪಿ ಸದಸ್ಯರು ಸರಕಾರದ ನಿರ್ಧಾರ ಖಂಡಿಸಿ ಸಭಾತ್ಯಾಗ ನಡೆಸಿದರು. ನಂತರ ಸಿ.ಟಿ ರವಿ ಬಂಧನ ಖಂಡಿಸಿ ಸುವರ್ಣಸೌಧದ ಮುಂಬಾಗ ಪ್ರತಿಭಟನೆ ನಡೆಸಿ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು ಈ ಸಂದರ್ಭದಲ್ಲಿ ಬಿಜೆಪಿ ಶಸಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.