
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ ; ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಗಾಯಗೊಂಡ ಸಚಿವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ರಸ್ತೆಗೆ ಅಡ್ಡಬಂದ ನಾಯಿ ತಪ್ಪುಸುವ ಸಂದರ್ಭದಲ್ಲಿ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಸಚಿವರ ಕಾರು ಮರಕ್ಕೆ ಗುದ್ದಿದ್ದು, ಹೆಬ್ಬಾಳಕರ್ ಅವರಿಗೆ ಸಣ್ಣಪುಟ್ಟ ಗಾಯವಾಗಿದೆ.
ಸಧ್ಯ ಬೆಳಗಾವಿ ನಗರದ ರವಿ ಪಾಟೀಲ್ ಆಸ್ಪತ್ರೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಯಾವುದೇ ತೊಂದರೆ ಇಲ್ಲ ಎಂದು ಆಸ್ಪತ್ರೆ ವೈದ್ಯರು ಸ್ಪಷ್ಟಪಡಿಸಿದ್ದಾರೆ.