
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುಣಮುಖರಾಗಲೆಂದು ಉಳವಿಯಲ್ಲಿ ವಿಶೇಷ ಪೂಜೆ

ಬೆಳಗಾವಿ : ಭೀಕರ ರಸ್ತೆ ಅಪಘಾತದಲ್ಲಿ ಸಿಲುಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಬೇಗ ಗುಣಮುಖರಾಗಲಿ ಎಂದು ಅವರ ಅಭಿಮಾನಿಗಳು ಉಳವಿ ಚನ್ನಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದರು.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿಮಾನಿಗಳಾದ ಅಡಿವೆಪ್ಪ ತೊಟಗಿ ಹಾಗೂ ಕುಟುಂಬದವರು ಉಳವಿ ಚನ್ನಬಸವೇಶ್ವರ ದೇವಸ್ಥಾನಕ್ಕೆ ತೆರಳಿ ರುದ್ರಾಭಿಷೇಕ ನೆರವೇರಿಸಿ ಸಚಿವರು ಹಾಗೂ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭೇಗ ಗುಣಮುಖರಾಗಲಿ ಎಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ.