
ಹೆಬ್ಬಾಳಕರ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ; ವೈದ್ಯರು ಹೇಳಿದ್ದೇನು..?

ಬೆಳಗಾವಿ : ರಸ್ತೆ ಅಪಘಾತದ ನಂತರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಆರೋಗ್ಯದ ಕುರಿತು ವೈದ್ಯರು ಮಹತ್ವದ ಹೇಳಿಕೆ ನೀಡಿದ್ದಾರೆ.
ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಡಾ. ರವಿ ಪಾಟೀಲ ಹೆಬ್ಬಾಳಕರ್ ಆರೋಗ್ಯದ ಕುರಿತು ಮಾಹಿತಿ ನೀಡಿದರು. ಮೂರು ದಿನಗಳವರೆಗೆ ಹೆಬ್ಬಾಳಕರ್ ಅವರಿಗೆ ಚಿಕಿತ್ಸೆ ಮುಂದುವರಿದಿದ್ದು ಸಾಕಷ್ಟು ಚೇತರಿಕೆಯಾಗಿದ್ದಾರೆ ಎಂದರು.
ಇಂದು ಬೆಳಿಗ್ಗೆ ಅಲ್ಟ್ರಾಸೌಂಡ್ ಸ್ಕ್ಯಾನ್ ಮಾಡಲಾಗಿತ್ತು, ಯಾವುದೇ ತೀವ್ರತರವಾದ ಗಾಯ ಕಂಡುಬಂದಿಲ್ಲ. ದಿನದಿಂದ ದಿನಕ್ಕೆ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ನಾಲ್ಕೈದು ದಿನದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದರು.
ಸಚಿವರ ಸಹೋದರ ಚನ್ನರಾಜ ಹಟ್ಟಿಹೊಳಿ, ಗನ್ ಮ್ಯಾನ್ ಹಾಗೂ ಕಾರು ಚಾಲಕ ಆರೋಗ್ಯದಲ್ಲಿ ಸಂಪೂರ್ಣ ಚೆತರಿಸಿಕೊಂಡಿದ್ದಾರೆ.