
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಳಗಾವಿ : ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಮಾಡಿ ಸಿಎಂ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದರು.
ಸೋಮವಾರ ನಗರದ ವಿಜಯಾ ಆಸ್ಪತ್ರೆಗೆ ಭೇಟಿನೀಡಿದ ಇವರು, ಸಚಿವರ ಆರೋಗ್ಯದ ಕುರಿತು ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರಿಂದ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಸಚಿವರಾದ ಡಾ. ಜಿ. ಪರಮೇಶ್ವರ್ ಹಾಗೂ ಹೆಚ್.ಸಿ ಮಹಾದೇವಪ್ಪ ಉಪಸ್ಥಿತರಿದ್ದರು.