
ಬಾಕಿ ಎರಡು ಕಂತಿನ ಗೃಹಲಕ್ಷ್ಮೀ ಹಣ ಬಿಡುಗಡೆ ; ಮಹತ್ವದ ಅಪ್ಡೇಟ್ ಕೊಟ್ಟ ಸಚಿವೆ ಲಕ್ಷ್ಮೀ

ಬೆಳಗಾವಿ : ಗೃಹಲಕ್ಷ್ಮೀ ಯೋಜನೆ ಬಾಕಿ ಎರಡು ಕಂತಿನ ಹಣ ಬಿಡುಗಡೆ ವಿಚಾರವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಹತ್ವದ ಅಪ್ಡೇಟ್ ನೀಡಿದ್ದಾರೆ.
ಈಗಾಗಲೇ ಬಜೆಟ್ ಅಧಿವೇಶನ ಮುಕ್ತಾಯವಾಗಿದ್ದು, ಮಾರ್ಚ್ ತಿಂಗಳ ಮುಕ್ತಾಯ ವಾದ ನಂತರ ಏಪ್ರಿಲ್ ನಲ್ಲಿ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು.
6ನೇ ಗ್ಯಾರಂಟಿ ಬಗ್ಗೆ ಸಿಎಂ ನಿರ್ಧಾರ : ಕರ್ನಾಟಕದಲ್ಲಿ ಈಗಾಗಲೇ ಪಂಚ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿದ್ದು, ಅಂಗನವಾಡಿ ಕಾರ್ಯಕರ್ತೆಯರಿಗೆ ಆರನೇ ಗ್ಯಾರಂಟಿ ನೀಡುವುದರ ಬಗ್ಗೆ ಸಿಎಂ ತೀರ್ಮಾನ ಕೈಗೊಳ್ಳುವರು.
2017ರಲ್ಲಿ ಸಿದ್ದರಾಮಯ್ಯನವರೇ ಸಿಎಂ ಆಗಿದ್ದಾಗ, ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನ ಹೆಚ್ಚಿಸಲಾಗಿತ್ತು. ಈಗ ಮತ್ತೆ ಅವರೇ ಗೌರವ ಧನವನ್ನು ಏರಿಸಿದ್ದಾರೆ. ಜೊತೆಗೆ 2023ರಿಂದ ನಿವೃತ್ತಿಯಾದವರಿಗೆ ಗ್ರ್ಯಾಚ್ಯುಟಿಯನ್ನು ನೀಡಿಲಾಗುತ್ತಿದೆ ಎಂದು ಸಚಿವರು ತಿಳಿಸಿದರು.